ಉದಯವಾಹಿನಿ, ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ 25ನೇ ವರ್ಷದ ಸಂಭ್ರಮ ಸಮಾರಂಭ ನಡೆಯುತ್ತಿದ್ದು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪುನರ್ ಆಯ್ಕೆ ಆಗಿದ್ದಾರೆ. ನಿನ್ನೆ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಇಬ್ಬರನ್ನ ಒಮ್ಮದಿಂದ ಆಯ್ಕೆ ಮಾಡಲಾಯ್ತು. ಇನ್ನು ಜೆಡಿಎಸ್ ಪಕ್ಷ ಸ್ಥಾಪನೆ ಆಗಿ 25 ವರ್ಷಗಳು ತುಂಬಿದ ಹಿನ್ನಲೆಯಲ್ಲಿ ರಜತ ಮಹೋತ್ಸವ ಆಚರಣೆಯನ್ನ ಜೆಡಿಎಸ್ ಮಾಡ್ತಿದೆ. ಬೃಹತ್ ಸಮಾವೇಶ ಜೆಪಿ ಭವನದಲ್ಲಿ ನಡೆಯುತ್ತಿದ್ದು, ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ (ಸೇರಿ ಪಕ್ಷದ ಹಾಲಿ, ಮಾಜಿ ಶಾಸಕರು, ಸಂಸದರು, ಪಕ್ಷದ ನಾಯಕರು ಭಾಗಿಯಾಗಲಿದ್ದಾರೆ. 2 ದಿನಗಳ ರಜತಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಸೇರುವ ಸಾಧ್ಯತೆ ಇದೆ.
