ಉದಯವಾಹಿನಿ, ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ ನಿವಾಸಿ ಶರೋನ್ ವಿವಾಹ ಶುಕ್ರವಾರ ನಿಗದಿಯಾಗಿತ್ತು. ಈ ಹಿನ್ನೆಲೆ ವಧು ಅವನಿ ಮೇಕಪ್ ಮಾಡಿಸಿಕೊಳ್ಳಲೆಂದು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವನಿಯ ಬೆನ್ನುಮೂಳೆಗೆ ತೀವ್ರ ಗಾಯವಾಗಿ ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
