ಉದಯವಾಹಿನಿ,ಕುಶಾಲನಗರ:  ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹೆಬ್ಬಾಲೆ ಉಪವಲಯ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಉಪ ವಲಯ ಅರಣ್ಯ ಅಧಿಕಾರಿ ಭರತ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಗ್ರಾಮೀಣ ಪ್ರದೇಶದ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಕಣಿವೆಯ ಕಾವೇರಿ ನದಿ ದಡ ಸಮೀಪದ ಸಸ್ಯ ಕ್ಷೇತ್ರದಲ್ಲಿ ವಿವಿಧ ಜಾತಿ ಸಸಿಗಳನ್ನು ಬೆಳೆಸಲಾಗಿದೆ ಸರ್ಕಾರ ನಿಗದಿ ಮಾಡಿದ ರಿಯಾಯಿತಿ ದರದ ಹಣವನ್ನು ಪಾವತಿಸಿ ಸಸಿಗಳನ್ನು ಪಡೆದು ತಮ್ಮ ಜಮೀನಿನ ಬದುಗಳ ಅಂಚಿನಲ್ಲಿ ನೆಡಬಹುದು ಎಂದರು. ಗ್ರಾಮ ಪಂಚಾಯತ್ ಸದಸ್ಯ ಮಹೇಶ್ ವನಮಹೋತ್ಸವದ ವಿಷಯದ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯನಿ ರೇಖಾ ರಮೇಶ್. ಸಹ ಶಿಕ್ಷಕ.ದೇವರಾಜು ಅರಣ್ಯ ವೀಕ್ಷಕರಾದ ರಾಜಪ್ಪ ರಕ್ಷಕರಾದ ವರುಣ್ ಸುರೇಶ್ ಮೂರ್ತಿ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!