ಉದಯವಾಹಿನಿ, ಗುವಾಹಟಿಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಆರಂಭ ಪಡೆದುಕೊಂಡಿದೆ. ಉತ್ತಮ ಆರಂಭ ಪಡೆಯಲು ಕೆಎಲ್ ರಾಹುಲ್ ಮಾಡಿದ ಎಡವಟ್ಟು ಕೂಡ ಕಾರಣ. ಜಸ್ಪ್ರೀತ್ ಬುಮ್ರಾ ಎಸೆದ ಪಂದ್ಯದ 7ನೇ ಓವರ್ನ 2ನೇ ಎಸೆತದಲ್ಲಿ ಐಡೆನ್ ಮಾರ್ಕ್ರಾಮ್ ಸ್ಲಿಪ್ನಲ್ಲಿ ಸುಲಭ ಕ್ಯಾಚ್ ನೀಡಿದ್ದರು. ಕ್ಯಾಚ್ ಅನ್ನು ಕೈಚೆಲ್ಲಿದ್ದು ಟೀಮ್ ಇಂಡಿಯಾ ಪಾಲಿಗೆ ದುಬಾರಿಯಾಯಿತು. ಕೇವಲ 12 ರನ್ ಬಾರಿಸಿದ್ದ ಮಾರ್ಕ್ರಾಮ್ ಆ ಬಳಿಕ 26 ರನ್ಗಳ ಕೊಡುಗೆ ನೀಡಿದರು. ರಯಾನ್ ರಿಕೆಲ್ಟನ್ ಜೊತೆಗೂಡಿ ಮೊದಲ ವಿಕೆಟ್ಗೆ 82 ರನ್ಗಳ ಜೊತೆಯಾಟವಾಡಿದರು. ಜೊತೆಯಾಟದೊಂದಿಗೆ ಉತ್ತಮ ಆರಂಭ ತನ್ನದಾಗಿಸಿಕೊಂಡ ಸೌತ್ ಆಫ್ರಿಕಾ ತಂಡವು ಮೊದಲ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 247 ರನ್ ಕಲೆಹಾಕಿದೆ.
ಸೌತ್ ಆಫ್ರಿಕಾ ಪ್ಲೇಯಿಂಗ್ 11: ಐಡೆನ್ ಮಾರ್ಕ್ರಾಮ್, ರಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಟ್ರಿಸ್ಟನ್ ಸ್ಟಬ್ಸ್, ಕೈಲ್ ವೆರ್ರೆನ್ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಸೆನುರಾನ್ ಮುತ್ತುಸಾಮಿ, ಸೈಮನ್ ಹಾರ್ಮರ್, ಕೇಶವ್ ಮಹಾರಾಜ್, ಭಾರತ ಪ್ಲೇಯಿಂಗ್ 11: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಧ್ರುವ ಜುರೆಲ್, ರಿಷಭ್ ಪಂತ್ (ನಾಯಕ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
