ಉದಯವಾಹಿನಿ, ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಗಿದಿದೆ. ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ದಿನದಾಟದಲ್ಲಿ ಉಭಯ ತಂಡಗಳಿಂದ ಸಮಬಲದ ಹೋರಾಟ ಕಂಡು ಬಂದಿದೆ. ಪರಿಣಾಮ ಮೊದಲ ದಿನದಾಟದಲ್ಲಿ ಸೌತ್ ಆಫ್ರಿಕಾ ತಂಡ ಆಲೌಟ್ ಆಗಿಲ್ಲ, ಇತ್ತ ಟೀಮ್ ಇಂಡಿಯಾ ಹೆಚ್ಚು ರನ್ ಬಿಟ್ಟು ಕೊಟ್ಟಿಲ್ಲ ಎನ್ನಬಹುದು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಉತ್ತಮ ಆರಂಭ ಪಡೆದುಕೊಂಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ರಯಾನ್ ರಿಕೆಲ್ಟನ್ (35) ಹಾಗೂ ಐಡೆನ್ ಮಾರ್ಕ್ರಾಮ್ (38) ಮೊದಲ ವಿಕೆಟ್​ಗೆ 82 ರನ್ ಪೇರಿಸಿ ಉತ್ತಮ ಆರಂಭ ಒದಗಿಸಿದ್ದರು.
ಇದಾದ ಬಳಿಕ ಬಂದ ಟ್ರಿಸ್ಟನ್ ಸ್ಟಬ್ಸ್ 49 ರನ್ ಬಾರಿಸಿದರೆ, ಟೆಂಬಾ ಬವುಮಾ 41 ರನ್​ಗಳ ಕೊಡುಗೆ ನೀಡಿದರು. ಇನ್ನು ಟೋನಿ ಡಿ ಝೋರ್ಝಿ 28 ರನ್ ಬಾರಿಸಿ ಮೊಹಮ್ಮದ್ ಸಿರಾಜ್​ಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಸೌತ್ ಆಫ್ರಿಕಾ ತಂಡವು ಮೊದಲ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 247 ರನ್​ಗಳಿಸಿದೆ. ಟೀಮ್ ಇಂಡಿಯಾ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಕಬಳಿಸಿದ್ದಾರೆ. ಇನ್ನುಳಿದ 3 ವಿಕೆಟ್​ಗಳನ್ನು ಪಡೆದಿರುವುದು ಕುಲ್ದೀಪ್ ಯಾದವ್.ಮೊದಲ ದಿನದಾಟದಲ್ಲಿ 247 ರನ್​ಗಳಿಸಿರುವ ಸೌತ್ ಆಫ್ರಿಕಾ ಪರ ವಿಕೆಟ್ ಕೀಪರ್ ಬ್ಯಾಟರ್ ಕೈಲ್ ವೆರ್ರೆನ್ನೆ (1) ಹಾಗು ಸೆನುರಾನ್ ಮುತ್ತುಸಾಮಿ (25) ದ್ವಿತೀಯ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಲಿದ್ದಾರೆ.
ಸೌತ್ ಆಫ್ರಿಕಾ ಪ್ಲೇಯಿಂಗ್ 11: ಐಡೆನ್ ಮಾರ್ಕ್ರಾಮ್, ರಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಟ್ರಿಸ್ಟನ್ ಸ್ಟಬ್ಸ್, ಕೈಲ್ ವೆರ್ರೆನ್ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಸೆನುರಾನ್ ಮುತ್ತುಸಾಮಿ, ಸೈಮನ್ ಹಾರ್ಮರ್, ಕೇಶವ್ ಮಹಾರಾಜ್.

Leave a Reply

Your email address will not be published. Required fields are marked *

error: Content is protected !!