ಉದಯವಾಹಿನಿ, ಬೆಂಗಳೂರು: ರಾಹುಲ್ ಗಾಂಧಿ ವಿದೇಶದಿಂದ ಬಂದ ನಂತರ ಅಧಿಕಾರ ಹಂಚಿಕೆ ಮಾತುಕತೆ ಅಂತಿಮಗೊಳ್ಳುವ ಸಾಧ್ಯತೆಯಿದೆ. ಸಿಎಂ ಸಿದ್ದರಾಮಯ್ಯ ಜೊತೆ ಒನ್ ಟಿ ಒನ್ ಸಭೆ ನಡೆಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸಭೆ ನಡೆಸಿದರು. ಇಬ್ಬರ ಜೊತೆಗಿನ ಸಭೆಯ ಬಳಿಕ ದೆಹಲಿಯಲ್ಲಿ ಹೈಕಮಾಂಡ್ ಮಟ್ಟದ ಸಭೆ ನಡೆಯಲಿದೆ. ರಾಹುಲ್ ಗಾಂಧಿ ವಿದೇಶದಿಂದ ಬಂದ ತಕ್ಷಣ ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಸಭೆ ನಡೆಯುವ ಸಾಧ್ಯತೆ.
