ಉದಯವಾಹಿನಿ, ಬೀದರ್: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ತಾಲೂಕಿನ ಬೆನಕನಹಳ್ಳಿ ಗ್ರಾಮದ ಬಳಿ ನಡೆದಿದೆ. ಮಲ್ಲಿಕಾರ್ಜುನ ಜೋಳದಪ್ಪಕ (40) ಮತ್ತು ಪವನ್ ಕುಮಾರ್ (32) ಮೃತ ದುರ್ದೈವಿಗಳು. ಅಪಘಾತದಲ್ಲಿ ಸಿಲುಕಿದ ಎರಡು ದ್ವಿಚಕ್ರ ವಾಹನಗಳ ಪೈಕಿ ಒಂದು ಹೀರೋ ಹೊಂಡಾ ಬೈಕ್ ಬೀದರ್‌ನಿಂದ ಔರಾದ್ ಕಡೆಗೆ ಹಾಗೂ ಇನ್ನೊಂದು ಆಕ್ಟೀವ್ ಹೊಂಡಾ ಚಾಂಬೋಳ ಕಡೆಯಿಂದ ಬೀದರ್ ಕಡೆಗೆ ಹೊರಟಿತ್ತು. ಎರಡು ವಾಹನಗಳನ್ನು ವೇಗವಾಗಿ ಚಲಾಯಿಸಿಕೊಂಡು ಬರುವಾಗ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನೂ ಮೂವರು ಸ್ಥಿತಿ ಚಿಂತಾಜನಕವಾಗಿದ್ದು, ಓರ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡವರನ್ನು ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
