ಉದಯವಾಹಿನಿ, ಡೆಹ್ರಾಡೂನ್: ಉತ್ತರಾಖಂಡದ ಅಲ್ಮೋರಾದ ದಬಾರಾ ಗ್ರಾಮದ ಶಾಲೆಯ ಸಮೀಪವೇ ಅಪಾರ ಪ್ರಮಾಣದ ಸ್ಫೋಟಕ ಪತ್ತೆಯಾಗಿದೆ.
ಶಾಲೆ ಬಳಿಯ ಪೊದೆಯೊಂದರಲ್ಲಿ ಅನುಮಾನಾಸ್ಪದ ಪ್ಯಾಕೆಟ್‌ಗಳನ್ನು ಶಾಲೆಯ ಪ್ರಾಂಶುಪಾಲರು ಮೊದಲು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಪ್ಯಾಕೆಟ್‌ಗಳಲ್ಲಿ 20 ಕೆಜಿಗಿಂತ ಹೆಚ್ಚು ತೂಕದ 161 ಜೆಲಾಟಿನ್ ಕಡ್ಡಿಗಳು ಪತ್ತೆಯಾಗಿವೆ. ಇದರಿಂದ ಪೊಲೀಸರು ಅಲರ್ಟ್‌ ಆಗಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದಾರೆ.
ಇತ್ತೀಚೆಗೆ ದೆಹಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದಲ್ಲಿ ಸುಮಾರು 3,000 ಕೆಜಿ ಸ್ಫೋಟಕಗಳು ಪತ್ತೆಯಾಗಿದ್ದವು. ಇದಾದ ಕೆಲವು ದಿನಗಳ ನಂತರ ಉತ್ತರಾಖಂಡದಲ್ಲಿ ಅಪಾರ ಪ್ರಮಾಣದ ಸ್ಫೋಟಕ ಪತ್ತೆಯಾಗಿದೆ. ಸ್ಥಳದಲ್ಲಿ ಉಧಮ್ ಸಿಂಗ್ ನಗರ ಮತ್ತು ನೈನಿತಾಲ್ ಜಿಲ್ಲೆಯ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದಿಂದ ಪರಿಶೀಲನೆ ನಡೆಸಲಾಗಿದೆ. ಬಾಂಬ್ ನಿಷ್ಕ್ರಿಯ ದಳವು ಸ್ಫೋಟಕಗಳನ್ನು ಸಂಗ್ರಹಿಸಿ, ಅವುಗಳನ್ನು ಮುಚ್ಚಿ ಸುರಕ್ಷಿತ ಸ್ಥಳದಲ್ಲಿ ಇರಿಸಿದೆ.
ಲಾಟಿನ್ ಕಡ್ಡಿಗಳು ಗಣಿಗಾರಿಕೆ ಉದ್ದೇಶಗಳಿಗಾಗಿ ಬಂಡೆಗಳನ್ನು ಸ್ಫೋಟಿಸಲು ಸಾಮಾನ್ಯವಾಗಿ ಬಳಸಲಾಗುತ್ತದೆ. ಗ್ರಾಮಕ್ಕೆ ಸ್ಫೋಟಕಗಳನ್ನು ಯಾವ ಕಾರಣಕ್ಕೆ ತರಲಾಗಿದೆ ಎಂದು ತನಿಖೆ ಮಾಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!