ಉದಯವಾಹಿನಿ, ಜೋಹಾನ್ಸ್‌ಬರ್ಗ್: ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಮತ್ತು ಭಾರತದ ಪ್ರಧಾನಿ ಮೋದಿ ಅವರು ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ತಂತ್ರಜ್ಞಾನ, ಸಂಶೋಧನೆ ಕ್ಷೇತ್ರದ ಬೆಳವಣಿಗೆಯಲ್ಲಿ ಪರಸ್ಪರ ಸಹಕಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಅಧಿಕಾರವಹಿಸಿಕೊಂಡ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಸುಧಾರಣೆಯಾಗುತ್ತಿದೆ ಎಂಬುದಕ್ಕೆ ಪ್ರಮುಖ ಸಾಕ್ಷಿಯಾಗಿದೆ.
ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನ ಮಂತ್ರಿಗಳಾದ ಆಂಟನಿ ಅಲ್ಬನೀಸ್, ಮಾರ್ಕ್ ಕಾರ್ನಿ ಮತ್ತು ಮೋದಿ ಅವರು ಭಾರತ, ಆಸ್ಟ್ರೇಲಿಯಾ ಮತ್ತು ಕೆನಡಾ ನಡುವೆ ತ್ರಿಪಕ್ಷೀಯ ತಂತ್ರಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಪಾಲುದಾರಿಕೆ ಮಾಡುವುದಾಗಿ ಘೋಷಿಸಿಕೊಂಡಿವೆ. ತಂತ್ರಜ್ಞಾನ, ಶುದ್ಧ ಇಂಧನ ಮತ್ತು ನಿರಂತರ ಸಮನಾದ ಪೂರೈಕೆಗೆ ಅಗತ್ಯವಾದ ವ್ಯವಸ್ಥೆ ನಿರ್ಮಿಸುವುದು ಸೇರಿದೆ. ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲಿದೆ.
ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮವಾದ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಸ್ಟ್ರೇಲಿಯಾ, ಕೆನಡಾ ಮತ್ತು ಭಾರತದ ನಡುವಿನ ಪಾಲುದಾರಿಕೆಯನ್ನು ಘೋಷಿಸಲು ನಾನು ಸಂತೋಷಪಡುತ್ತೇನೆ. ಇದು ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರದಲ್ಲಿ ಮೂರು ಖಂಡಗಳ ನಡುವಿನ ಸಹಯೋಗವನ್ನು ಬಲಪಡಿಸುತ್ತದೆ ಎಂದು ತಿಳಿಸಿದ್ದಾರೆ.
