ಉದಯವಾಹಿನಿ, ಬೆಂಗಳೂರು: ಬೆಳಗಾವಿ ಅಧಿವೇಶನಕ್ಕೆ ಸಿದ್ಧತೆ ಆಗಿದ್ದು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಈ ಬಾರಿ ಹೆಚ್ಚು ಅವಕಾಶ ಕೊಡೋದಾಗಿ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನಕ್ಕೆ ಸಂಪೂರ್ಣ ತಯಾರಿ ನಡೆಸಿದ್ದೇವೆ. ಬೆಳಗಾವಿಯಲ್ಲಿ ಈಗಾಗಲೇ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇವೆ. ಅಧಿವೇಶನಕ್ಕೆ ಬರುವ ಯಾರಿಗೂ ಸಮಸ್ಯೆ ಆಗದಂತೆ ಕ್ರಮ ತೆಗೆದುಕೊಂಡಿದ್ದೇವೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಆದ್ಯತೆ ನೀಡುತ್ತಿದ್ದೇವೆ ಎಂದರು.
ಸರ್ಕಾರ 31 ಬಿಲ್ ತರ್ತಿದ್ದು, ಉತ್ತರ ಕರ್ನಾಟಕ ಚರ್ಚೆಗೆ ಅವಕಾಶ ತಡೆಯುತ್ತಿದೆ ಅಂತ ಬಿಜೆಪಿ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿಯಮದ ಪ್ರಕಾರ ಬಿಲ್ ಕೂಡ ಬರಲಿದೆ. ಬಿಲ್ ಬಗ್ಗೆಯೂ ಚರ್ಚೆ ನಡೆಸುತ್ತೇವೆ. ಅಧಿವೇಶನದಲ್ಲಿ ಚರ್ಚೆ ಆಗೋ ವಿಷಯಗಳಗಳ ಬಿಎಸಿ ಸಭೆ ನಡೆಯಲಿದೆ. ಸಭೆಯಲ್ಲಿ ಆಡಳಿತ ಮತ್ತು ವಿಪಕ್ಷಗಳ ನಾಯಕರು ಇರುತ್ತಾರೆ. ಅಲ್ಲಿ ಏನೆಲ್ಲಾ ಚರ್ಚೆ ಆಗಬೇಕು ಅಂತ ಚರ್ಚೆ ಆಗಲಿದೆ. ಅದರಂತೆ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!