ಉದಯವಾಹಿನಿ, ವಿಜಯಪುರ: ನಿಂತಿದ್ದ ಎಲೆಕ್ಟ್ರಿಕ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ನಗರದ ಸೈನಿಕ ಸ್ಕೂಲ್ ಬಳಿ ನಡೆದಿದೆ. ಸೈನಿಕ್ ಸ್ಕೂಲ್ ಬಳಿ ಎಲೆಕ್ಟ್ರಿಕ್ ಕಾರು ಪಾರ್ಕ್ ಆಗಿತ್ತು. ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸುಟ್ಟು ಕರಕಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಗಾಹುತಿಯಾಗಿರುವ ಕಾರಿನ ಮಾಲೀಕ ಕುರಿತು ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
