ಉದಯವಾಹಿನಿ, ದೆಹಲಿ : ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆ ಮೂಲಕ ಪಾಕಿಸ್ತಾನ ಪತರಗುಟ್ಟುವಂತೆ ಮಾಡಿದ ಭಾರತ ಇದೀಗ ನೆರೆ ರಾಷ್ಟ್ರಕ್ಕೆ ಮತ್ತೊಂದು ಎಚ್ಚರಿಕೆ ನೀಡಿದೆ. ʼʼಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಪಾಕಿಸ್ತಾನದ ಸಿಂಧ್‌ ಪ್ರಾಂತ್ಯ ಭಾರತದ ಕೈವಶವಾಗಬಹುದು, ಗಡಿ ಬದಲಾಗಬಹುದುʼʼ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಈ ಮೂಲಕ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ರವಾನಿಸಿದರು. 1947ರ ದೇಶ ವಿಭಜನೆಯ ವೇಳೆ ಹಲವು ನಾಯಕರ ವಿರೋಧದ ನಡೆವೆಯೂ ಸಿಂಧ್‌ ಪ್ರಾಂತ್ಯ ಪಾಕಿಸ್ತಾನದ ಕೈವಶವಾಗಿತ್ತು.
ಸಿಂಧ್‌ ಪ್ರಾಂತ್ಯ ಪಾಕಿಸ್ತಾನಕ್ಕೆ ಸೇರುವುದು ಹಿಂದೂಗಳಿಗೆ ಇಷ್ಟವಿರಲಿಲ್ಲ. ಎಲ್‌.ಕೆ. ಅಡ್ವಾಣಿಯಂತಹ ಧೀಮಂತ ನಾಯಕರು ಈ ವಿಭಜನೆಯನ್ನು ವಿರೋಧಿಸಿದ್ದರು ಎಂದು ರಾಜನಾಥ್‌ ಸಿಂಗ್‌ ನೆನಪಿಸಿಕೊಂಡರು.
“ಲಾಲ್ ಕೃಷ್ಣ ಅಡ್ವಾಣಿ ತಮ್ಮ ಪುಸ್ತಕವೊಂದರಲ್ಲಿ ಸಿಂಧಿ ಹಿಂದೂಗಳು, ವಿಶೇಷವಾಗಿ ಅವರ ಪೀಳಿಗೆಯವರು, ಭಾರತದಿಂದ ಸಿಂಧ್ ಪ್ರಾಂತ್ಯವನ್ನು ಪ್ರತ್ಯೇಕಿಸಿರುವುದನ್ನು ಇನ್ನೂ ಒಪ್ಪಿಕೊಂಡಿಲ್ಲ ಎಂದು ಬರೆದಿದ್ದಾರೆ. ಸಿಂಧ್‌ನಲ್ಲಿ ಮಾತ್ರವಲ್ಲ ಭಾರತದಾದ್ಯಂತ ಇರುವ ಹಿಂದೂಗಳು ಸಿಂಧೂ ನದಿಯನ್ನು ಪವಿತ್ರವೆಂದು ಪರಿಗಣಿಸುತ್ತಾರೆ. ಸಿಂಧ್‌ನಲ್ಲಿರುವ ಅನೇಕ ಮುಸ್ಲಿಮರು ಕೂಡ ಸಿಂಧೂ ನದಿಯ ನೀರು ಮೆಕ್ಕಾದ ಆಬ್-ಎ-ಜಮ್‌ಜಮ್‌ನಷ್ಟೇ ಪವಿತ್ರ ಎಂದು ನಂಬಿದ್ದರು. ಇದನ್ನು ಅಡ್ವಾಣಿ ತಮ್ಮ ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ” ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!