ಉದಯವಾಹಿನಿ, ಒಟ್ಟಾವಾ: ಖಲಿಸ್ತಾನ್ ಪರ ಪ್ರತ್ಯೇಕತಾವಾದಿಗಳು ಆಯೋಜಿಸಿದ್ದ ‘ಖಲಿಸ್ತಾನ್ ರೆಫರೆಂಡಂ’ಕಾರ್ಯಕ್ರಮದಲ್ಲಿ ಭಾರತದ ಧ್ವಜ ಕೆಳಗಿಳಿಸಿ ಅವಮಾನ ಮಾಡಿದ ಘಟನೆ ಒಟ್ಟಾವಾದಲ್ಲಿ ನಡೆದಿದೆ. ಭಾರತ ಕಾಯ್ದೆಯಡಿ ನಿಷೇಧಿಸಿಸಲ್ಪಟ್ಟ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಭಾರತೀಯ ರಾಷ್ಟ್ರಧ್ವಜವನ್ನು ಅವಮಾನಿಸಲಾಗಿದೆ. ಭಾರತೀಯ ವಿರೋಧಿ, ಹಿಂಸಾತ್ಮಕ ಘೋಷಣೆಗಳನ್ನು ಕೂಗಿದ್ದು, ಈ ಘಟನೆಯ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಖಲಿಸ್ತಾನ್ಗಾಗಿ ಜನಾಭಿಪ್ರಾಯ ಸಂಗ್ರಹಿಸಲು ಮತದಾರರ ನೋಂದಣಿಯನ್ನು ಆರಂಭಿಸುವುದಾಗಿ ನಿಷೇಧಿತ ಸಂಘಟನೆ ಸಿಖ್ಸ್ ಫಾರ್ ಜಸ್ಟೀಸ್ (ಎಸ್ಎಫ್ಜೆ) ಘೋಷಿಸಿತ್ತು. ಈ ಹಿನ್ನಲೆಯಲ್ಲಿ ಇಲ್ಲಿನ ಮ್ಯಕ್‌ನ್ಯಾಬ್ ಸಮುದಾಯ ಕೇಂದ್ರದ ಬಳಿ ಆಯೋಜಿಸಲಾಗಿದ್ದ ಮತದಾನ ಪ್ರಕ್ರಿಯೆಯಲ್ಲಿ ಈ ದುಷೃತ್ಯ ಎಸಗಲಾಗಿದ್ದು, ಖಾಲಿಸ್ತಾನ್ ಧ್ವಜಗಳನ್ನು ಹಿಡಿದ ಬೆಂಬಲಿಗರು ಭಾರತೀಯ ಧ್ವಜವನ್ನು ಅವಮಾನಿಸಿದ ದೃಶ್ಯವುಳ್ಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಲವರು ಭಾರತೀಯ ನಾಯಕರನ್ನು ಗುರಿಯಾಗಿಸಿಕೊಂಡು ಘೋಷವಾಕ್ಯಗಳನ್ನು ಕೂಗಿದ್ದು, ಭಾರತೀಯ ನಾಯಕರನ್ನು ಹತ್ಯೆ ಮಾಡಿ ಎಂಬಂತಹ ಪ್ರಚೋದನಾತ್ಮಕ ಘೋಷಣೆ ಕೂಗಿರುವುದು ವಿಡಿಯೊದಲ್ಲಿ ರೆಕಾರ್ಡ್ ಆಗಿದೆ.
