ಉದಯವಾಹಿನಿ, ಬ್ಯಾಂಕಾಕ್: ಥಾಯ್ಲೆಂಡ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 100 ಮಿ. ಹರ್ಡಲ್ಸ್‌ನಲ್ಲಿ ಭಾರತದ ಜ್ಯೋತಿ ಯೆರ‍್ರಾಜಿ ಚಿನ್ನದ ಪದಕ ಗೆದ್ದಿದ್ದಾರೆ. 26 ವರ್ಷದ ಜ್ಯೋತಿ ಯೆರ‍್ರಾಜಿ, ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ತಮ್ಮ ಶ್ರೇಷ್ಠ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದು, ದೇಶದ ಕೀರ್ತಿ ಪತಾಕೆ ಹಾರಿಸಿದ್ದಾರೆ.
