ಉದಯವಾಹಿನಿ, ಮೈಸೂರು: ತನಿಖಾಧಿಕಾರಿಗಳು ಸಾಕ್ಷಿಯನ್ನು ಕೊಡುವಲ್ಲಿ ಬಹಳಷ್ಟು ಎಡವಿದ್ದರು. ಆರೋಪಿಗಳನ್ನು ರಕ್ಷಿಸಲು ಸರಿಯಾದ ದಾಖಲೆಗಳನ್ನು ಸಲ್ಲಿಸಿರಲಿಲ್ಲ. ನಾವು ಪ್ರಶ್ನೆ ಮಾಡಿದ್ದಕ್ಕೆ ನಮ್ಮ ಮೇಲೆಯೇ ಷಡ್ಯಂತ್ರದ ಕೇಸ್ ಹಾಕಿದ್ದರು ಎಂದು ಒಡನಾಡಿ ಸಂಸ್ಥೆಯ ಪರಶು ಹೇಳಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಖುಲಾಸೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಈಗ ನಾನು ಯಾರನ್ನು ದೂಷಿಸಲು ಹೋಗುವುದಿಲ್ಲ. ನ್ಯಾಯಾಲಯ ಏನು ಹೇಳಿದೆಯೋ ಆ ತೀರ್ಪನ್ನು ಓದಬೇಕು. ವಕೀಲರ ಜೊತೆ ಸೇರಿ ಚರ್ಚೆ ಮಾಡಿ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.
=ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿತ್ತು. ಮಕ್ಕಳ ಧ್ವನಿಯನ್ನು ಸರ್ಕಾರ ಕೇಳಬೇಕಿತ್ತು. ಆದರೆ ಈ ಪ್ರಕರಣವನ್ನು ದುರ್ಬಲ ಮಾಡುತ್ತಲೇ ಬಂದಿದ್ದರು. ವಿಚಾರಣಾ ಹಂತದಲ್ಲೇ ಈ ಪ್ರಕರಣವನ್ನು ದುರ್ಬಲ ಮಾಡಿದ್ದು ಗೊತ್ತಾಗಿತ್ತು. ಹಲವಾರು ಲೋಪಲೋಷವನ್ನು ಎತ್ತಿದ ನಮ್ಮ ಮೇಲೆಯೇ ಷಡ್ಯಂತ್ರ ಕೇಸ್ ಹಾಕಲಾಗಿತ್ತು ಎಂದು ಹೇಳಿದರು
