ಉದಯವಾಹಿನಿ, ಕಲಬುರಗಿ: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರ್ ಅಪಘಾತದಲ್ಲಿ ಮೃತರಾಗಿದ್ದಾರೆ. ಈ ಪ್ರಕರಣ ಸಂಬಂಧ ಚಾಲಕ ಆರೋಕಿಯಾ ಆಂಥೋನಿ ರಾಜ ವಿರುದ್ದ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಹಾಂತೇಶ್ ಬೀಳಗಿ ಸಂಬಂಧಿ ಬಸವರಾಜ್ ಕಮರಟಗಿ ಎಂಬವರು ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಜೇವರ್ಗಿ ಠಾಣೆಯ ಪೊಲೀಸರು ಚಾಲಕ ಆರೋಕಿಯಾ ಆಂಥೋನಿ ರಾಜ ವಿರುದ್ದ 281 , 125(A)125(B)106 ಬಿಎನ್‌ಎಸ್ ಅಡಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಚಾಲಕನ ಅತಿವೇಗ ಅಜಾರೋಗತೆಕತೆಯಿಂದ ಅಪಘಾತ ಸಂಭವಿಸಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ. ರಸ್ತೆ ಬದಿಯ ಬ್ರಿಡ್ಜ್ ಗೆ ಕಾರು ಡಿಕ್ಕಿಯಾಗಿ ನಾಲ್ಕೈದು ಬಾರಿ ಕಾರ್ ಪಲ್ಟಿಯಾಗಿದೆ. ಕಾರ್ ಪಲ್ಟಿಯಾದ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ರೆ, ಆಸ್ಪತ್ರೆಯಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸಾವನ್ನಪ್ಪಿದ್ದಾರೆ. ಕಾರ್ ಚಾಲಕ ಆಂಥೋನಿ ರಾಜ್ ಸಹ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
