ಉದಯವಾಹಿನಿ, ಲಕ್ನೋ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದ ಸಭೆಗೆ ಗೈರಾದ ಕಾರಣ ಅಮಾನತುಗೊಂಡ ಅಧಿಕಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 25 ವರ್ಷದ ಗುಮಾಸ್ತ ಸುಧೀರ್ ಕುಮಾರ್ ಆತ್ಮಹತ್ಯೆಗೆ ಶರಣಾದವರು. ಇವರಿಗೆ ಮದುವೆ ನಿಶ್ಚಯವಾಗಿತ್ತು. ವಿವಾಹಕ್ಕೆ ಒಂದು ದಿನವಷ್ಟೇ ಬಾಕಿ ಇರುವಾಗ, ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ವಿವಾಹದ ಸಿದ್ಧತೆಗಳಿಂದಾಗಿ ಭಾನುವಾರ ಅಧಿಕೃತ ಸಭೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಕುಮಾರ್‌ನನ್ನು ಅಮಾನತು ಮಾಡಿದ್ದರು. ಇದರಿಂದ ನನ್ನ ಸಹೋದರ ಮಾನಸಿಕವಾಗಿ ನೊಂದಿದ್ದ ಎಂದು ಮೃತನ ಸಹೋದರಿ ಪೊಲೀಸರಿಗೆ ದೂರು ನೀಡಿದ್ದಾರೆ.
ಒಂದು ದಿನ ಬೆಳಗ್ಗೆ ಕುಮಾರ್ ನಿವಾಸಕ್ಕೆ ಅಧಿಕಾರಿಯೊಬ್ಬರು ಬಂದು ನಿಮ್ಮನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದರು. ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನನ್ನ ಸಹೋದರ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಸಹೋದರಿ ದೂರಿದ್ದಾರೆ.
ಡಿ.4ರ ಗಡುವು ಕಾರಣಕ್ಕೆ, ಅನೇಕ ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ತೊಡಗಿರುವ ಅಧಿಕಾರಿಗಳ ಸಾವಿನ ಸಂಖ್ಯೆಗಳು ವರದಿಯಾಗುತ್ತಿವೆ. ಕೆಲಸದ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಕುಟುಂಬಗಳು ಆರೋಪಿಸಿವೆ.

Leave a Reply

Your email address will not be published. Required fields are marked *

error: Content is protected !!