ಉದಯವಾಹಿನಿ, ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹತ್ಯೆ ವದಂತಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಈ ಬಗ್ಗೆ ಅಫ್ಘಾನಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಕೊಲೆಯಾಗಿದ್ದಾರೆ ಎಂದು ಅಫ್ಘಾನಿಸ್ತಾನದ ಮಾಧ್ಯಮಗಳು ಬುಧವಾರ ವರದಿ ಪ್ರಕಟಿಸಿವೆ. ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗುತ್ತಿದೆ. ಆದಾಗ್ಯೂ, ಪಾಕಿಸ್ತಾನ ಸರ್ಕಾರ ಅಥವಾ ಅದರ ಸೇನೆಯಿಂದ ಯಾವುದೇ ದೃಢೀಕರಣ ಬಂದಿಲ್ಲ.
ಅಫ್ಘಾನಿಸ್ತಾನ ರಕ್ಷಣಾ ಸಚಿವಾಲಯ ಈ ಬಗ್ಗೆ ಎಕ್ಸ್‌ ಪೋಸ್ಟ್‌ ಹಂಚಿಕೊಂಡಿದ್ದು, ಪಾಕಿಸ್ತಾನಿ ಆಡಳಿತವು ಜೈಲಿನಲ್ಲಿ ಇಮ್ರಾನ್ ಖಾನ್ ಅವರನ್ನು ಕೊಂದ ಆರೋಪ ಕೇಳಿಬಂದಿದೆ. ಇಮ್ರಾನ್ ಖಾನ್ ಬೆಂಬಲಿಗರು ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಸಾವಿರಾರು ಸದಸ್ಯರು ತಮ್ಮ ನಾಯಕನ ಬಗ್ಗೆ ಮಾಹಿತಿ ಪಡೆಯುವ ಪ್ರಯತ್ನದಲ್ಲಿ ಅಡಿಯಾಲಾ ಜೈಲಿಗೆ ನುಗ್ಗಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ. ಇದರ ಪರಿಣಾಮವಾಗಿ, ಪಾಕಿಸ್ತಾನಿ ಮಿಲಿಟರಿ ಆಡಳಿತವು ತೀವ್ರ ಸಾರ್ವಜನಿಕ ಒತ್ತಡದಲ್ಲಿದೆ. ಇತ್ತೀಚೆಗೆ ಜೈಲಿನ ಭದ್ರತೆಗಾಗಿ ನೂರಾರು ಸೈನಿಕರನ್ನು ನಿಯೋಜಿಸಿದೆ. ಪಿಟಿಐ ಬೆಂಬಲಿಗರು ತಮ್ಮ ನಾಯಕನ ಬಗ್ಗೆ ಸತ್ಯವನ್ನು ಬಹಿರಂಗಪಡಿಸುವ ಪ್ರಯತ್ನದಲ್ಲಿ ಮಿಲಿಟರಿ ಆಡಳಿತದ ದಬ್ಬಾಳಿಕೆಯನ್ನು ಶೀಘ್ರದಲ್ಲೇ ಕೊನೆಗೊಳಿಸಬಹುದು ಎಂದು ವ್ಯಾಪಕವಾಗಿ ನಂಬಲಾಗಿದೆ.

Leave a Reply

Your email address will not be published. Required fields are marked *

error: Content is protected !!