ಉದಯವಾಹಿನಿ,ಬೆಂಗಳೂರು: ಯಾರು ಕಳಪೆ ಮೊಟ್ಟೆ ಪೂರೈಕೆ ಮಾಡಿದ್ದಾರೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲು ಮತ್ತು ಸಪ್ಲೈ ಲಿಸ್ಟ್ನಿಂದಲೂ ಕೈ ಬಿಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಯಾವುದೇ ಕಂಟ್ರೋಲ್ ಇಲ್ಲದೆ ಮೊಟ್ಟೆ ಖರೀದಿ ನಡೆಯುತ್ತಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕೆಂಬುದು ಇಲಾಖೆ ಉದ್ದೇಶ. ಆದರೆ ಇಲಾಖೆ ಉದ್ದೇಶವೇ ಎಡವುತ್ತಿರುವುದು ಗಮನಕ್ಕೆ ಬಂದಿದೆ ಎಂದರು. ರಾಮನಗರ, ಹಾಸನ, ಉತ್ತರ ಕರ್ನಾಟಕದ ಹಲವೆಡೆ ಈ ರೀತಿ ಆಗಿದೆ. ಮೊಟ್ಟೆ ವಿಚಾರದ ಬಗ್ಗೆ ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ. ಎಲ್ಲೆಲ್ಲಿ ಈ ರೀತಿ ನಡೆದಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲ. ಹಾಗಾಗಿ ಕೂಲಂಕಷವಾಗಿ ಮಾಹಿತಿ ಪಡೆಯುತ್ತೇನೆ. ಈಗಾಗಲೇ ಮೊಟ್ಟೆ ಪೂರೈಕೆ ಸಂಬಂಧಿಸಿದಂತೆ ಸುಮಾರು ಪ್ರಸ್ತಾಪ ಇದೆ. ಸುಮ್ಮನೆ ಡಿಸೈಡ್ ಮಾಡೋಕೆ ಆಗಲ್ಲ ಎಂದು ಹೇಳಿದರು.
