ಉದಯವಾಹಿನಿ, ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ರಾವಲ್ಪಿಂಡಿಯ ಜೈಲಿನಲ್ಲೇ ಕೊಲೆಯಾಗಿದ್ದಾರೆ ಎಂಬ ವದಂತಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ ಪಾಕಿಸ್ತಾನಿ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.
ಹೌದು. ಇಮ್ರಾನ್ ಖಾನ್ ಹತ್ಯೆಯಾಗಿರುವುದಾಗಿ ಅಫ್ಘಾನಿಸ್ತಾನ ಮಾಧ್ಯಮಗಳು ವರದಿ ಮಾಡಿದ್ದವು. ಈ ಬೆನ್ನಲ್ಲೇ ಪಾಕಿಸ್ತಾನದ ಅಡಿಯಾಲ ಜೈಲು ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ಇಮ್ರಾನ್ ಖಾನ್ ಜೈಲಿನಲ್ಲಿ ಸುರಕ್ಷಿತವಾಗಿದ್ದಾರೆ, ಫಿಟ್ ಆಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹಬ್ಬಿರುವ ವದಂತಿ ಶುದ್ಧ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಖಾನ್ ಅವರಿಗೆ ಸರಿಯಾದ ರೀತಿಯಲ್ಲೇ ಆರೈಕೆ ನೀಡಲಾಗುತ್ತಿದೆ. ಅವರ ಸುರಕ್ಷತೆಗೆ ಬೆದರಿಕೆಯೊಡ್ಡುವ ಯಾವುದೇ ಘಟನೆ ನಡೆದಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಹರಡುತ್ತಿರುವ ವದಂತಿ ಸುಳ್ಳು ಎಂದು ಹೇಳಿದ್ದಾರೆ.ಜೈಲು ಅಧಿಕಾರಿಗಳು ಇಮ್ರಾನ್ ಖಾನ್ ಸುರಕ್ಷತೆ ಬಗ್ಗೆ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ನಾಯಕರು ಕುಟುಂಬ ಸದಸ್ಯರಿಗೆ ಇಮ್ರಾನ್ ಖಾನ್ ಭೇಟಿ ಮಾಡಲು ಕುಟುಂಬಸ್ಥರಿಗೆ ಅವಕಾಶ ಕಲ್ಪಿಸಲು ಮನವಿ ಮಾಡಿದೆ. ಖಾನ್ ಭದ್ರತೆ ನೀಡಬೇಕಾದದ್ದು, ಅವ್ರ ಹಕ್ಕುಗಳನ್ನು ರಕ್ಷಿಸಬೇಕಿರುವುದು ಸರ್ಕಾರದ ಜವಾಬ್ದಾರಿ. ಖಾನ್ ಸುರಕ್ಷತೆಗೆ ಸ್ವಲ್ಪ ಹೆಚ್ಚು ಕಡಿಮೆಯಾದ್ರೂ ಜನ ಸಹಿಸಲ್ಲ. ಹಾಗಾಗಿ ಅವರ ಆರೋಗ್ಯದ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿವಂತೆ ಒತ್ತಾಯಿಸಿದೆ.
