ಉದಯವಾಹಿನಿ, ಹಾಂಗ್‌ಕಾಂಗ್: ಹಾಂಗ್‌ಕಾಂಗ್‌ನ ತೈಪೊ ಜಿಲ್ಲೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಅಗ್ನಿ ಅವಘಡ ರೌದ್ರ ನರ್ತನ ತಾಳಿದೆ. ವಾಂಗ್ ಫುಕ್ ಕೋರ್ಟ್ ಎಂಬ 8 ಬಹುಮಹಡಿ ಕಟ್ಟಡಗಳ ಸಂಕೀರ್ಣದಲ್ಲಿ ಕಾಣಿಸಿಕೊಂಡ ಬೆಂಕಿಗೆ ಬಲಿಯಾಗಿರುವವರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ.
ಇನ್ನೂ ಹಲವರು ಒಳಗೇ ಸಿಲುಕಿರುವ ಪರಿಣಾಮ ಸಾವು-ನೋವು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ 900ಕ್ಕೂ ಹೆಚ್ಚು ಸಂತ್ರಸ್ತರಿಗೆ ತಾತ್ಕಾಲಿಕ ಆಶ್ರಯ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಎಲ್ಲಾ ರೀತಿಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸುಮಾರು 2,000 ಅಪಾರ್ಟ್‌ಮೆಂಟ್‌ಗಳನ್ನ ಹೊಂದಿರುವ ಈ ಬೃಹತ್ ವಸತಿ ಸಮುಚ್ಚಯದಲ್ಲಿ ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳು ನಡೆಯುತ್ತಿದ್ದವು. ಇದಕ್ಕಾಗಿ ಕಟ್ಟಡಗಳ ಹೊರಭಾಗದಲ್ಲಿ ಬಿದಿರಿನ ಅಟ್ಟಣಿಗೆ ರಚಿಸಲಾಗಿತ್ತು. ಈ ಬಿದಿರಿನ ರಚನೆಗಳಿಗೆ ಮೊದಲು ಬೆಂಕಿ ಹೊತ್ತಿಕೊಂಡಿದ್ದು, ಬಲವಾದ ಗಾಳಿ ಮತ್ತು ಉರಿಯುತ್ತಿದ್ದ ಅವಶೇಷಗಳು ತೂರಿಬಂದ ಪರಿಣಾಮ, ಪಕ್ಕದ 7 ಕಟ್ಟಡಗಳಿಗೂ ಬೆಂಕಿ ವ್ಯಾಪಿಸಿದೆ.

Leave a Reply

Your email address will not be published. Required fields are marked *

error: Content is protected !!