ಉದಯವಾಹಿನಿ, ಗುವಾಹಟಿ: ಭಾರತ ತಂಡದ ವೇಗಿ ಮೊಹಮ್ಮದ್‌ ಸಿರಾಜ್‌ ಅವರಿಗೆ ಬುಧವಾರ ವಿಮಾನ ಪ್ರಯಾಣದ ವೇಳೆ ತೊಂದರೆ ಉಂಟಾಗಿದೆ. ಈ ಕುರಿತು ಸಿರಾಜ್‌ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದ (X 2884) ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದಾರೆ. ಬುಧವಾರ ರಾತ್ರಿ ಗುವಾಹಟಿಯಿಂದ ಹೈದರಾಬಾದ್‌ಗೆ ಹೊರಟಿದ್ದ ಸಿರಾಜ್‌ ಅವರ ವಿಮಾನ ಸಂಜೆ 7:25ಕ್ಕೆ ನಿರ್ಗಮಿಸಬೇಕಿತ್ತು. ಆದರೆ ವಿಮಾನ ಕೆಲ ತಾಂತ್ರಿಕ ಸಮಸ್ಯೆಗಳ ಕಾರಣ ಸೂಕ್ತ ಸಮಯಕ್ಕೆ ಹಾರಲು ಸಾಧ್ಯವಾಗಲಿಲ್ಲ. ಈ ಕುರಿತು ಮಾಹಿತಿ ಕೇಳಿದರೆ ವಿಮಾನಯಾನ ಸಂಸ್ಥೆ ಸ್ಪಷ್ಟ ವಿವರಣೆ ನೀಡಿಲ್ಲ. ಇದರಿಂದಾಗಿ ಪ್ರಯಾಣಿಕರು ನಾಲ್ಕು ಗಂಟೆಗಳ ಕಾಲ ಗೊಂದಲಕ್ಕೆ ಸಿಲುಕುವಂತಾಯಿತು ಎಂದು ಟೀಮ್‌ ಇಂಡಿಯಾ ವೇಗಿ ಆರೋಪಿಸಿದ್ದಾರೆ.

ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿರಾಜ್‌, “ಗುವಾಹಟಿಯಿಂದ ಹೈದರಾಬಾದ್‌ಗೆ ಹೋಗುವ ಏರ್ ಇಂಡಿಯಾ ವಿಮಾನ ಸಂಖ್ಯೆ IX 2884 ಸಂಜೆ 7:25 ಕ್ಕೆ ಹೊರಡಬೇಕಿತ್ತು, ಆದರೆ ವಿಮಾನಯಾನ ಸಂಸ್ಥೆಯಿಂದ ಯಾವುದೇ ಮಾಹಿತಿ ಬಂದಿಲ್ಲ. ಪದೇ ಪದೇ ಕೇಳಿದ ನಂತರವೂ, ಅವರು ಯಾವುದೇ ಸರಿಯಾದ ಕಾರಣವನ್ನು ನೀಡದೆ ವಿಮಾನವನ್ನು ವಿಳಂಬ ಮಾಡಿದ್ದಾರೆ. ಇದು ಅತ್ಯಂತ ನಿರಾಶಾದಾಯಕವಾಗಿದೆ ಮತ್ತು ಇದು ಯಾವುದೇ ಪ್ರಯಾಣಿಕರ ಮೂಲ ನಿರೀಕ್ಷೆಯಾಗಿದೆ. ವಿಮಾನ ಹೊರಡುವುದು 4 ಗಂಟೆಗಳಷ್ಟು ವಿಳಂಬವಾಯಿತು.

Leave a Reply

Your email address will not be published. Required fields are marked *

error: Content is protected !!