ಉದಯವಾಹಿನಿ, ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ದಾಖಲಾದ ಮೂರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಢಾಕಾ ಕೋರ್ಟ್ 21 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಢಾಕಾದ ಪುರ್ಬಾಚಲ್ ಪ್ರದೇಶದಲ್ಲಿ ಸರ್ಕಾರಿ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪದ ಮೇಲೆ ಬಾಂಗ್ಲಾದೇಶದ ಭ್ರಷ್ಟಾಚಾರ ನಿಗ್ರಹ ಆಯೋಗ ಶೇಖ್ ಹಸೀನಾ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ 6 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದೆ. ಉಳಿದ ಮೂರು ಪ್ರಕರಣಗಳ ತೀರ್ಪು ಡಿಸೆಂಬರ್ 1 ರಂದು ಪ್ರಕಟವಾಗಲಿದೆ. ಬಾಂಗ್ಲಾ ದಂಗೆಯ ಬಳಿಕ ಶೇಖ್ ಹಸೀನಾ ಮತ್ತು ಕುಟುಂಬ ತಲೆಮರೆಸಿಕೊಂಡ ಕಾರಣ ಅವರ ಪರ ನ್ಯಾಯಾಲಯದಲ್ಲಿ ವಾದಿಸಲು ಯಾವುದೇ ವಕೀಲರು ಇಲ್ಲವಾಗಿದೆ.
