ಉದಯವಾಹಿನಿ, ನನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್‌ ಸರಣಿಯಲ್ಲಿ ವೈಟ್‌ವಾಷ್‌ ಆಘಾತ ಅನುಭವಿಸಿರುವ ಭಾರತ ತಂಡ ತೀವ್ರ ಟೀಕೆಗೆ ಗುರಿಯಾಗಿದೆ. ಕಳೆದ 12 ತಿಂಗಳಲ್ಲಿ ಭಾರತ ತಂಡ ತವರಿನಲ್ಲಿ ಸತತ ಎರಡು ಕ್ಲೀನ್‌ಸ್ವೀಪ್‌ ಮುಜುಗರ ಅನುಭವಿಸಿದೆ. ಇದರ ನಡುವೆ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ದಿಗ್ಗಜ ಎಬಿ ಡಿವಿಲಿಯರ್ಸ್‌ ಭಾರತೀಯ ಬ್ಯಾಟರ್‌ಗಳನ್ನು ಬೆಂಬಲಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಉತ್ತಮ ಗುಣಮಟ್ಟದ ಸ್ಪಿನ್‌ ಬೌಲಿಂಗ್‌ ವಿರುದ್ಧ ಕಳಪೆ ಪ್ರದರ್ಶನ ನೀಡಿರುವ ಭಾರತದ ಬ್ಯಾಟಿಂಗ್‌ ಲೈನ್‌ಅಪ್‌ ಟೀವ್ರ ಟೀಕೆಗೆ ಗುರಿಯಾಗಿದೆ. ಆದಾಗ್ಯೂ, ಭಾರತ ತಂಡದಲ್ಲಿ ಉತ್ತಮ ಪ್ರತಿಭಾನ್ವಿತ ಬ್ಯಾಟರ್‌ಗಳಿದ್ದಾರೆ. ಹೀಗಾಗಿ ಆತಿಥೇಯ ತಂಡ ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಡಿವಿಲಿಯರ್ಸ್‌ ತಿಳಿಸಿದ್ದಾರೆ.
ಯೂಟ್ಯೂಬ್‌ ಚಾನೆಲ್‌ನಲ್ಲಿ ಮಾತನಾಡಿರುವ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್‌, “ಇದು ನೋವಿನ ಸಂಗತಿ ಎಂದು ನನಗೆ ತಿಳಿದಿದೆ, ಆದರೆ ಎಲ್ಲಾ ಸ್ವರೂಪಗಳಲ್ಲಿ ಭಾರತೀಯ ಕ್ರಿಕೆಟ್‌ ನೋಡಿದಾಗ, ಚಿಂತಿಸಲು ಹೆಚ್ಚಿನದೇನೂ ಇಲ್ಲ ಎಂದು ನಾನು ಭಾವಿಸುತ್ತೇನೆ. ಇತ್ತೀಚೆಗೆ ಬಹಳಷ್ಟು ಬದಲಾವಣೆಗಳಾಗಿವೆ. ಆದ್ದರಿಂದ ಅವರು ಸ್ವಲ್ಪ ಲಯ ಕಂಡುಕೊಳ್ಳಬೇಕಾಗಬಹುದು. ಮೈದಾನದಲ್ಲಿ ಆ ರೀತಿಯ ಹೋರಾಟವನ್ನು ನಾನು ನಿರೀಕ್ಷಿಸುತ್ತೇನೆ. ಭಯಪಡುವ ಅಗತ್ಯವಿಲ್ಲ. ಅವರ ಬಳಿ ಸಾಕಷ್ಟು ಪ್ರತಿಭೆಗಳಿವೆ, ಸಾಕಷ್ಟು ಆಯ್ಕೆಗಳಿವೆ ಮತ್ತು ಅವರು ಮುಂದುವರಿಯಲು ಬಳಸಬಹುದಾದ ವಿಭಿನ್ನ ಸಂಯೋಜನೆಗಳಿವೆ,” ಎಂದು ಎ ಬಿ ಡಿವಿಲಿಯರ್ಸ್‌ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!