ಉದಯವಾಹಿನಿ, ಶಿವಮೊಗ್ಗ: ಶೀಘ್ರದಲ್ಲೇ ಸರ್ಕಾರಿ ಶಾಲೆಗಳಿಗೆ (12 ಸಾವಿರ ಮತ್ತು ಅನುದಾನಿತ ಶಾಲೆಗಳಿಗೆ 6 ಸಾವಿರ ಸೇರಿ ಒಟ್ಟು 18 ಸಾವಿರ ಶಿಕ್ಷರನ್ನ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಶಿಕ್ಷಕರ (Teachers) ಕೊರತೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ 12 ಸಾವಿರ, ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಕ್ಕಳ ಸ್ವಾಗತಕ್ಕೆ ಈ ಶಿಕ್ಷಕರೇ ಉಪಸ್ಥಿತರಿರುತ್ತಾರೆ. ಅಲ್ಲಿಗೆ ನಾವು ಒಟ್ಟು 32 ಸಾವಿರ ಶಿಕ್ಷಕರ ನೇಮಕ ಮಾಡಿದ ಹಾಗೆ ಆಗುತ್ತದೆ ಎಂದು ಮಾಹಿತಿ ನೀಡಿದರು.
ಶಿವಮೊಗ್ಗದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಶಿಕ್ಷಕರ (Teachers) ಕೊರತೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ 12 ಸಾವಿರ, ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಕ್ಕಳ ಸ್ವಾಗತಕ್ಕೆ ಈ ಶಿಕ್ಷಕರೇ ಉಪಸ್ಥಿತರಿರುತ್ತಾರೆ. ಅಲ್ಲಿಗೆ ನಾವು ಒಟ್ಟು 32 ಸಾವಿರ ಶಿಕ್ಷಕರ ನೇಮಕ ಮಾಡಿದ ಹಾಗೆ ಆಗುತ್ತದೆ ಎಂದು ಮಾಹಿತಿ ನೀಡಿದರು.
