ಉದಯವಾಹಿನಿ, ಮುಂಬೈ: ಎಸ್‌ಬಿಐ ಕಾರು ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯವು ಬಿಎಂಡಬ್ಲ್ಯು, ಮರ್ಸಿಡಿಸ್, ಲ್ಯಾಂಡ್ ರೋವರ್ ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.ವಾಹನ ಸಾಲ ವಂಚನೆಯ ವಿರುದ್ಧ ಪುಣೆಯಲ್ಲಿ ಜಾರಿ ನಿರ್ದೇಶನಾಲಯವು ಕಾರ್ಯಾಚರಣೆ ನಡೆಸಿತು. ಸಾಲಗಾರರು ಮತ್ತು ಕಾರು ವಿತರಕರ 12 ವಸತಿ ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಅಫ್ಘಾನ್ ಪಾಸ್‌ಪೋರ್ಟ್ ಹೊಂದಿರುವ ಪ್ರಯಾಣಿಕರಿಗೆ ಅಮೆರಿಕ ವೀಸಾ ಸೇವೆ ಸ್ಥಗಿತಆರೋಪಿ ಸಾಲಗಾರರು ನಕಲಿ ದಾಖಲೆಗಳನ್ನು ಬಳಸಿಕೊಂಡು ಹೆಚ್ಚಿನ ಮೌಲ್ಯದ ಕಾರು ಸಾಲಗಳನ್ನು ವಂಚನೆಯಿಂದ ಪಡೆದುಕೊಂಡಿದ್ದಾರೆ. ಆ ಮೂಲಕ ಬ್ಯಾಂಕಿಗೆ ವಂಚಿಸಿದ್ದಾರೆ ಎಂದು ಇಡಿ ತನಿಖೆಯಿಂದ ತಿಳಿದುಬಂದಿದೆ.
