ಉದಯ
ವಾಹಿನಿ, ಬೆಂಗಳೂರು: ‘ರಾಜ್ಯದಲ್ಲಿ ೧೪ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದಿಸಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು, ರಾಜ್ಯ ಸರಕಾರದ ‘ಶಕ್ತಿ’ ಯೋಜನೆಗೂ ಮೆಚ್ಚುಗೆ ವ್ಯಕ್ತಪಡಿಸಿ, ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ”ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ಡಿ.ವೀರೇಂದ್ರ ಹೆಗ್ಗಡೆಯವರು ನಾನು ಮಂಡಿಸಿದ ೧೪ನೇ ಬಜೆಟ್ನ ಫಲಶೃತಿಯನ್ನು ಶ್ಲಾಘಿಸಿ ಹಾಗೂ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿ ಬರೆದಿರುವ ಪತ್ರಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.”ಅಧಿಕಾರಕ್ಕೆ ಬಂದ ಎರಡು ತಿಂಗಳೊಳಗೆ ಕಾಂಗ್ರೇಸ್ ಸರಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಹಲವು ಜನಪರ ಹಾಗೂ ಅಭಿವೃದ್ಧಿಗಳನ್ನು ಕೈಗೊಂಡಿದೆ.
ವೀರೇಂದ್ರ ಹೆಗ್ಗಡೆಯವರು ರ‍್ಕಾರದ ಸಾಧನೆ, ಯೋಜನೆಗಳನ್ನು ಮೆಚ್ಚಿ ಶ್ಲಾಘಿಸಿದ್ದು ಎಂದು ಕಾಂಗ್ರೇಸ್ ಟ್ವೀಟ್ ಮಾಡಿದೆ.
