ಉದಯವಾಹಿನಿ, ಚಿಕ್ಕಮಗಳೂರು: ದತ್ತ ಜಯಂತಿ ಫ್ಲೆಕ್ಸ್‌ನ್ನು ಕಿಡಿಗೇಡಿಗಳು ಬ್ಲೇಡ್‍ನಿಂದ ಕತ್ತರಿಸಿರುವ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಐಜಿ ರಸ್ತೆಯ ಉರ್ದು ಶಾಲೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಫ್ಲೆಕ್ಸ್ ಅಳವಡಿಸಿದ್ದರು. ಈ ಫ್ಲೆಕ್ಸ್‌ನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.
ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ದತ್ತಪೀಠದಲ್ಲಿ ಡಿಸೆಂಬರ್ 2 ರಿಂದ 4ರ ವರೆಗೆ ದತ್ತ ಜಯಂತಿ ನಡೆಯಲಿದೆ.

Leave a Reply

Your email address will not be published. Required fields are marked *

error: Content is protected !!