ಉದಯವಾಹಿನಿ , ಬೆಂಗಳೂರು: ಆಶ್ರಯ ಯೋಜನೆ ಮತ್ತು ಶಾಶ್ವತ ಪುನರ್ ವಸತಿ ಉದ್ದೇಶವೂ ಸೇರಿದಂತೆ ಇನ್ನಿತರ ಸಾರ್ವಜನಿಕ ಉದ್ದೇಶಗಳಿಗೆಂದು ಬೆಂಗಳೂರು ದಕ್ಷಿಣ ಸರ್ಕಾರಕ್ಕೆ ತಾಲ್ಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯ ಮೀಸಲಿರಿಸಿದ್ದ ೪೦ ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ ೩೫.೩೩ ಎಕರೆ ಜಮೀನನ್ನು ಆರೆಸ್ಸೆಸ್ ಅಂಗ ಸಂಸ್ಥೆ ಜನಸೇವಾ ಟ್ರಸ್ಟ್‌ಗೆ ಹಿಂದಿನ ಬಿಜೆಪಿ ಸರಕಾರ ಮಂಜೂರು ಮಾಡಿದ್ದ ಕ್ರಮಕ್ಕೆ ರಾಜ್ಯ ಕಾಂಗ್ರೇಸ್ ಸರ್ಕಾರಕ್ಕೆ ತಡೆ ನೀಡಿದೆ.
ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಎಷ್ಟು ರ‍್ಕಾರಿ ಜಮೀನನ್ನು ಸಂಘ ಸಂಸ್ಥೆಗಳಿಗೆ, ಇಲಾಖೆಗಳಿಗೆ ಮತ್ತು ವಿವಿಧ ಉದ್ದೇಶಗಳಿಗೆ ನೀಡಲಾಗಿದೆ ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಕೇಳಿದ್ದ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಲಿಖಿತ ಉತ್ತರ ನೀಡಿದ್ದಾರೆ. ”ಜನಸೇವಾ ಟ್ರಸ್ಟ್‌ಗೆ ೩೫ ಎಕರೆ ೩೩ ಗುಂಟೆ ಮಂಜೂರು ಮಾಡುವುದನ್ನು ತಡೆಹಿಡಿಯಲಾಗಿದೆ” ಎಂಬ ಮುಖ್ಯಮಂತ್ರಿಯವರ ಸೂಚನೆಯನ್ನು ಸಚಿವರು ಉತ್ತರದಲ್ಲಿ ಉಲ್ಲೇಖಿಸಿದ್ದಾರೆ.
