ಉದಯವಾಹಿನಿ : ತೆಲುಗು ಬಿಗ್​​ಬಾಸ್ ಮನೆಯಲ್ಲಿ ವಾರವೆಲ್ಲ ಸಂಜನಾ ಗಲ್ರಾನಿಯದ್ದೇ ಚರ್ಚೆ. ಸಂಜನಾ ಗಲ್ರಾನಿ ತೆಲುಗು ಬಿಗ್​​ ಬಾಸ್ ಸ್ಪರ್ಧಿಯಾಗಿ ಈ ವರೆಗೆ ಚೆನ್ನಾಗಿಯೇ ಆಡಿಕೊಂಡು ಬಂದಿದ್ದಾರೆ. ಹಲವರೊಟ್ಟಿಗೆ ಜಗಳ ಮಾಡಿದ್ದಾರೆ. ಕೆಲವರೊಟ್ಟಿಗೆ ಗೆಳೆತನ ಮಾಡಿದ್ದಾರೆ. ಟಾಸ್ಕ್​​ಗಳನ್ನು ಆಡಿದ್ದಾರೆ, ಆಡಿಸಿದ್ದಾರೆ. ಹೇಗೋ ಒಟ್ಟಾರೆ ಸುಮಾರು 80ಕ್ಕೂ ಹೆಚ್ಚು ದಿನಗಳನ್ನು ಬಿಗ್​​ಬಾಸ್ ಮನೆಯಲ್ಲಿ ಕಳೆದಿದ್ದಾರೆ. ಆದರೆ ಈ ವಾರ ಸಂಜನಾ, ತಮ್ಮ ಸಹಸ್ಪರ್ಧಿ ಬಗ್ಗೆ ಮಾಡಿದ್ದ ಕಮೆಂಟ್ ಭಾರಿ ಚರ್ಚೆಯನ್ನೇ ಹುಟ್ಟುಹಾಕಿತ್ತು. ವೀಕೆಂಡ್​​ನಲ್ಲಿ ನಾಗಾರ್ಜುನ ಅವರು ಈ ಬಗ್ಗೆ ಕಠಿಣ ವಿಚಾರಣೆ ನಡೆಸುವ ಸುಳಿವು ಮೊದಲೇ ಸಿಕ್ಕಿತ್ತು. ಅದರಂತೆ ನಾಗಾರ್ಜುನ ಅವರು ಸಂಜನಾಗೆ ಸಖತ್ ಕ್ಲಾಸ್ ತೆಗೆದಿದ್ದಾರೆ. ಮಾತ್ರವಲ್ಲದೆ ಸಂಜನಾ ಹೊರ ಜಗತ್ತಿನಲ್ಲಿ ಮಾಡಿದ ‘ತಪ್ಪಿ’ನ ಬಗ್ಗೆಯೂ ಉಲ್ಲೇಖ ಆಗಿದೆ.
ಸಂಜನಾ ಅವರು ಸಹ ಸ್ಪರ್ಧಿಗಳಾದ ರಿತು ಮತ್ತು ಡಿಮನ್ ಪವನ್ ಬಗ್ಗೆ ಅನುಚಿತವಾದ ಹೇಳಿಕೆ ನೀಡಿದ್ದರು. ಅವರಿಬ್ಬರು ವರ್ತಿಸುವ ರೀತಿ ಅಶ್ಲೀಲವಾಗಿರುತ್ತದೆ ಎಂಬರ್ಥ ಬರುವಂತೆ ಸಂಜನಾ ಹೇಳಿದ್ದರು. ನೀವಿಬ್ಬರು ಮಾಡುವುದನ್ನು ಕಣ್ಣಿಂದ ನೋಡಲಾಗುವುದಿಲ್ಲ ಎಂದೆಲ್ಲ ಹೇಳಿದ್ದರು. ಇದು ಮನೆಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ರಿತು, ಪವನ್ ಮಾತ್ರವಲ್ಲದೆ ಸಂಜನಾಗೆ ಆಪ್ತರಾಗಿದ್ದ ಕೆಲವರು ಸಹ ಸಂಜನಾ ಹೇಳಿಕೆಯನ್ನು ಖಂಡಿಸಿದ್ದರು. ಆದರೆ ಸಂಜನಾ ತಮ್ಮ ಹೇಳಿಕೆಯಿಂದ ಹಿಂದೆ ಸರಿದಿರಲಿಲ್ಲ. ಹಾಗಾಗಿ ವೀಕೆಂಡ್ ಎಪಿಸೋಡ್​​ ಮೇಲೆ ಎಲ್ಲರ ಕಣ್ಣು ನೆಟ್ಟಿತ್ತು. ನಿರೀಕ್ಷಿಸಿದಂತೆಯೇ ನಾಗಾರ್ಜುನ ಸಹ ಅದೇ ವಿಷಯವನ್ನು ಚರ್ಚೆಗೆ ಎತ್ತಿಕೊಂಡರು. ಆಗಲೂ ಸಹ ಸಂಜನಾ ಜಾರಿಕೆ ಉತ್ತರಗಳನ್ನು ನೀಡಿದರು. ನಾನು ಅವರಿಬ್ಬರ ಆಪ್ತತೆಯನ್ನು ನನಗೆ ನೋಡಲು ಆಗುವುದಿಲ್ಲ ಎಂದಷ್ಟೆ ಹೇಳಿದ್ದೇನೆ ಬೇರೇನು ಹೇಳಿಲ್ಲ ಎಂದರು ಆದರೆ ವಿಡಿಯೋ ಹಾಕಿ ಸಂಜನಾ ಹೇಳಿದ್ದೇನು ಎಂಬುದನ್ನು ಎಲ್ಲರ ಮುಂದಿಟ್ಟರು ನಾಗಾರ್ಜುನ ಮಾತ್ರವಲ್ಲದೆ, ಸಂಜನಾ, ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಇಲ್ಲವಾದರೆ ಮನೆಯಿಂದ ಹೊರಡಬಹುದು ಎಂದು ಸಹ ನಾಗಾರ್ಜುನ ಕಠಿಣವಾಗಿಯೇ ಮಾತನಾಡಿದರು

Leave a Reply

Your email address will not be published. Required fields are marked *

error: Content is protected !!