ಉದಯವಾಹಿನಿ : ಅರ್ಜೆಂಟೀನಾದ ಫುಟ್‌ಬಾಲ್ ಸ್ಟಾರ್ ಲಿಯೊನೆಲ್ ಮೆಸ್ಸಿ ಅವರ ಬಹುನಿರೀಕ್ಷಿತ ‘GOAT Tour of India’ ಪ್ರವಾಸ ಡಿ.13 ರಂದು ಆರಂಭವಾಗಲಿದೆ. ಪ್ರವಾಸದ ವೇಳೆ ಮೆಸ್ಸಿ ಕೋಲ್ಕತ್ತಾ, ಹೈದರಾಬಾದ್, ಮುಂಬೈ ಮತ್ತು ನವದೆಹಲಿಗೆ ಭೇಟಿ ನೀಡಲಿದ್ದಾರೆ.
ಭಾರತಕ್ಕೆ ಮೂರು ದಿನಗಳ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಸ್ಸಿ ಭೇಟಿಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಈ ಕುರಿತು ಇನ್‌ಸ್ಟಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೆಸ್ಸಿ, ಭಾರತ ತೋರುತ್ತಿರುವ ಪ್ರೀತಿಗೆ ಧನ್ಯವಾದಗಳು! GOAT (ಗ್ರೇಟೆಸ್ಟ್ ಆಫ್ ಆಲ್ ಟೈಮ್) ಪ್ರವಾಸಕ್ಕೆ ಇನ್ನು ಕೆಲವೇ ವಾರ ಬಾಕಿ ಇದೆ. ಕೋಲ್ಕತ್ತಾ, ಮುಂಬೈ, ದೆಹಲಿ ಹಾಗೂ ಹೈದರಾಬಾದ್ ನಗರಗಳಿಗೆ ಭೇಟಿ ನೀಡುತ್ತಿದ್ದೇನೆಂದು ತಿಳಿಸಲು ಸಂತಸವಾಗುತ್ತಿದೆ. ಶೀಘ್ರದಲ್ಲೇ ನಿಮ್ಮನ್ನು ಕಾಣುತ್ತೇನೆಂದು ಬರೆದುಕೊಂಡಿದ್ದಾರೆ.
