ಉದಯವಾಹಿನಿ,
ಮುಂಬೈ: ಕಳೆದ ತಿಂಗಳು ಮಹಾರಾಷ್ಟ್ರದ ಶಿವಸೇನೆ-ಬಿಜೆಪಿ ರ‍್ಕಾರಕ್ಕೆ ಉಪಮುಖ್ಯಮಂತ್ರಿಯಾಗಿ ಸೇರ್ಪಡೆಗೊಂಡಿದ್ದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರಿಗೆ ರಾಜ್ಯದ ಖಜಾನೆಯ ಜವಾಬ್ದಾರಿಯನ್ನು ನೀಡಲಾಗಿದೆ. ಅಜಿತ್ ಪವಾರ್ ಅವರು ಯೋಜನಾ ಇಲಾಖೆಯ ಜೊತೆಗೆ ರಾಜ್ಯ ಸರ್ಕಾರದ ಪ್ರಮುಖ ಖಾತೆಯಾದ ಹಣಕಾಸು ಸಚಿವಾಲಯವನ್ನುವಹಿಸಿಕೊಳ್ಳಲಿದ್ದಾರೆ ಎಂದು ವರದಿ ಮಾಡಿದೆ.
ಛಗನ್ ಭುಜಬಲ್ ಅವರು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ಸಂರಕ್ಷಣಾ ಇಲಾಖೆಯನ್ನು ನೋಡಿಕೊಳ್ಳಲಿದ್ದಾರೆ.
ದಿಲೀಪ್ ವಾಲ್ಸೆ ಪಾಟೀಲ್ ಅವರಿಗೆ ಸಹಕಾರ ಇಲಾಖೆ, ಧನಂಜಯ್ ಮುಂಡೆ ಅವರಿಗೆ ಕೃಷಿ ಖಾತೆಯನ್ನು ಹಂಚಲಾಗಿದೆ. ಹಸನ್ ಮುಶ್ರಿಫ್ ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಅನಿಲ್ ಪಾಟೀಲ್ ಮತ್ತು ಅದಿತಿ ತತ್ಕರೆ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಂಜಯ್ ಬನ್ಸೋಡೆ ಅವರಿಗೆ ಕ್ರೀಡೆ ಮತ್ತು ಯುವ ಕಲ್ಯಾಣ ಖಾತೆಗಳನ್ನು ನೀಡಲಾಗಿದೆ.
