ಉದಯವಾಹಿನಿ, ನಾಗಚೈತನ್ಯ ಅವರಿಂದ ವಿಚ್ಛೇದನ ಪಡೆದ ಬಳಿಕ ಒಂಟಿಯಾಗಿದ್ದ ತೆಲುಗು ನಟಿ ಸಮಂತಾ ರುತ್ ಪ್ರಭು ಇದೀಗ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿರ್ದೇಶಕ ರಾಜ್ ನಿಡಿಮೋರು ಜೊತೆ ನಟಿ ಸಮಂತಾ ರುತ್ ಪ್ರಭು ಅವರಿಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಹಬ್ಬಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಫೌಂಡೇಶನ್ ಆವರಣದಲ್ಲಿರುವ ಲಿಂಗಭೈರವಿ ದೇವಿಯ ದೇವಸ್ಥಾನದಲ್ಲಿ ಇಂದು ಸರಳ ವಿವಾಹವಾಗಿದ್ದಾರೆ. ಸಮಂತಾ ಕೆಂಪು ಸೀರೆ ಧರಿಸಿ ಮಿಂಚಿದ್ರೆ, ರಾಜ್ ನಿಡಿಮೋರು ವೈಟ್ & ವೈಟ್ ಕುರ್ತಾ ಧರಿಸಿ ಸರಳವಾಗಿ ಕಾಣಿಸಿಕೊಂಡಿದ್ದಾರೆ. ಫ್ಯಾಮಿಲಿ ಮ್ಯಾನ್ʼ, ʻಸಿಟಾಡೆಲ್ ಹನಿಬನಿʼ ನಿರ್ದೇಶಕನ ಜೊತೆ ಸಮಂತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲವು ತಿಂಗಳಿಂದ ಬಹಿರಂಗವಾಗೇ ಈ ಜೋಡಿ ಕಾಣಿಸ್ಕೊಳ್ತಾ ಬಂದಿತ್ತು. ಇದೀಗ ಗುಟ್ಟಾಗಿ ಕಲ್ಯಾಣವಾಗಿರುವ ವಿಚಾರವನ್ನ ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತ ಘೋಷಣೆ ಮಾಡಿದ್ದಾರೆ. ಮದುವೆಯ ಫೋಟೋಗಳನ್ನ ಸಮಂತಾ ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ರಾಜ್ ನಿಡಿಮೋರು ಈಗಾಗ್ಲೇ ವಿವಾಹವಾಗಿದ್ದು ಸಮಂತಾ ಜೊತೆ ಅವರಿಗೆ 2ನೇ ವಿವಾಹ.
