ಉದಯವಾಹಿನಿ, ಮಂಗಳೂರು: ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದೈವಗಳ ಅನುಕರಣೆ ಮಾಡಿದ ನಟ ರಣ್‍ವೀರ್ ಸಿಂಗ್ ವಿರುದ್ಧ ದೈವಾರಾಧಕರು ತೀವ್ರ ಬೇಸರ ಹೊರಹಾಕಿದ್ದಾರೆ. ರಣವೀರ್ ಸಿಂಗ್ ಚಾವುಂಡಿ ದೈವದ ಅವಾಹನೆ ಅಣಕಿಸಿದ್ದರು. ಇದಕ್ಕೆ ತುಳುನಾಡ ದೈವಾರಾದನೆ ರಕ್ಷಣಾ ಚಾವಡಿ ಸಂಚಾಲಕ ಕಮಲಾಕ್ಷ ಗಂಧಕಾಡು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ತುಳುನಾಡಿನ ದೈವಗಳಿಗೆ ನಿರಂತರ ಅವಮಾನ ಮಾಡಲಾಗುತ್ತಿದೆ. ಮನಸ್ಸಿಗೆ ಬಹಳ ನೋವಾಗುತ್ತಿದೆ ಎಂದು ಅವರು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಇದ್ದರೂ ಅದಕ್ಕೆ ವಿರೋಧಿಸದಿರುವುದು ಖಂಡನೀಯ. ರಣಬೀರ್ ಸಿಂಗ್ ಮಂಗಳೂರಿನ ಕದ್ರಿ ಮಂಜುನಾಥನ ಸನ್ನಿಧಿಗೆ ಬಂದು ಕ್ಷಮೆ ಕೇಳಬೇಕು. ಈ ತುಳುನಾಡಿನ ಮಣ್ಣಿಗೆ ಶರಣಾಗಬೇಕು. ನಿರ್ದೇಶಕ ರಿಷಬ್ ಶೆಟ್ಟಿ ಈ ಕೂಡಲೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!