ಉದಯವಾಹಿನಿ, ಬೆಂಗಳೂರು: ಕಾಂಗ್ರೆಸ್ ಮಾಜಿ ಶಾಸಕ ಆರ್‌ವಿ ದೇವರಾಜ್ ಅಂತ್ಯಕ್ರಿಯೆಯನ್ನು ನಾಳೆ ನಡೆಸಲು ಕುಟುಂಬಸ್ಥರು ತೀರ್ಮಾನ ತೆಗೆದುಕೊಂಡಿದ್ದಾರೆ.
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿದ್ದ ಮೃತದೇಹವನ್ನು ಇಂದು ಬೆಳಗ್ಗೆ ಅಂಬುಲೆನ್ಸ್ ಮೂಲಕ ಕಲಾಸಿಪಾಳ್ಯ ಬಳಿಯ ಮನೆಗೆ ತರಲಾಯಿತು.ಹತ್ತು ಗಂಟೆಯ ನಂತರ ಜೆಸಿ ರಸ್ತೆಯ ಪಕ್ಷದ ಕಚೇರಿ ಬಳಿ ಸಾರ್ವಜನಿಕ ವ್ಯವಸ್ಥೆಗೆ ಸಿದ್ದತೆ ನಡೆಸಲಾಗಿದೆ. ನಾಳೆ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಂದೇ ಕನಕಪುರ ಸೋಮನಹಳ್ಳಿಯ ತೋಟದ ಮನೆಯಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ.
ಹುಟ್ಟುಹಬ್ಬ ಆಚರಣೆಗೂ ಮೊದಲು ದೇವರಾಜ್ ಅವರು ಚಾಮುಂಡಿ ತಾಯಿಯ ದರ್ಶನಕ್ಕೆಂದು ನಿನ್ನೆ(ಡಿ.1) ಮೈಸೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಅವರಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆರ್‌ವಿ ದೇವರಾಜ್ ಕೊನೆಯುಸಿರೆಳೆದಿದ್ದಾರೆ.
