ಉದಯವಾಹಿನಿ, ಚಿತ್ರದುರ್ಗ: ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವ ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ಯೊಗೀಶ್ (31) ಮೃತ ದುರ್ದೈವಿ. ಅಡಿಕೆ ಕಟಾವು ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಭರಮಸಾಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
