ಉದಯವಾಹಿನಿ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಡ್ರಗ್ಸ್ ಪೂರೈಸಲು ಸಿದ್ಧವಾಗಿದ್ದ ಜಾಲಕ್ಕೆ ಸಿಸಿಬಿ ಭರ್ಜರಿ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 28 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು, ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಈ ಸಂಬಂಧ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಸಿಸಿಬಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಮೊದಲ ಪ್ರಕರಣದಲ್ಲಿ, 20 ಕೋಟಿ ರೂ. ಮೌಲ್ಯದ 10 ಕೆಜಿ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಟೀ ಪುಡಿ ಪ್ಯಾಕೆಟ್‌ಗಳಲ್ಲಿ ಅಡಗಿಸಿಟ್ಟು ಈ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದರು. ಎರಡನೇ ಪ್ರಕರಣದಲ್ಲಿ, ವಿದೇಶದಿಂದ ಬಂದಿದ್ದ 8 ಕೋಟಿ ರೂ. ಮೌಲ್ಯದ 8 ಕೆಜಿ ಹೈಡ್ರೋ ಗಾಂಜಾವನ್ನು ಚಾಮರಾಜಪೇಟೆಯ ಅಂಚೆ ಕಚೇರಿಯಲ್ಲಿ ಪರಿಶೀಲನೆ ನಡೆಸುವ ವೇಳೆ ಪತ್ತೆ ಹಚ್ಚಿ ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ, 28 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
