ಉದಯವಾಹಿನಿ, ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದೂ ಕೂಡ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಚರ್ಚೆಗೆ ಪಟ್ಟು ಹಿಡಿದು ಪ್ರತಿಪಕ್ಷಗಳು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದೆ. ಪರಿಣಾಮ ಉಭಯ ಸದನಗಳ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಕಲಾಪ ಆರಂಭಗೊಂಡಾಗ ಎಸ್‌ಐಆರ್ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷ ಸದಸ್ಯರು ಪ್ರತಿಭಟನೆ ಆರಂಭಿಸಿದರು. ಸದನದ ಬಾವಿಗಿಳಿದು, ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗದ್ದಲ ಹೆಚ್ಚಾದಾಗ ಸ್ಪೀಕರ್ ಓಂ ಬಿರ್ಲಾ ಸದನವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು. 12 ಗಂಟೆಗೆ ಸದನ ಮತ್ತೆ ಸೇರಿದಾಗ ಪ್ರತಿಪಕ್ಷ ಸದಸ್ಯರು ಪ್ರತಿಭಟನೆ ಮುಂದುವರಿಸಿದರು. ಹಾಗಾಗಿ, ಸ್ಪೀಕರ್ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ ಮಾಡಿದರು. ಬಳಿಕವೂ ಗದ್ದಲವೂ ಮುಂದುವರಿದ ಹಿನ್ನಲೆ ನಾಳೆಗೆ ಕಲಾಪ ಮುಂದೂಡಲಾಯಿತು. ಬಳಿಕ ಸ್ಪೀಕರ್ ಓಂಬಿರ್ಲಾ ಸರ್ವಪಕ್ಷ ಸಭೆ ಕರೆದು ಮಾತುಕತೆ ನಡೆಸಿದರು.

 

Leave a Reply

Your email address will not be published. Required fields are marked *

error: Content is protected !!