ಉದಯವಾಹಿನಿ, ಬ್ರಾಟಿಸ್ಲಾವಾ: ಕರ್ನಾಟಕದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ತರಬೇತಿ ಪಡೆದು ಅತ್ಯುನ್ನತ ಮಟ್ಟದ ಕೌಶಲ್ಯ ತರಬೇತಿ ಪಡೆದುಕೊಳ್ಳುತ್ತಿರುವ ಉದ್ಯೋಗಿಗಳಿಗೆ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಬೇಡಿಕೆ ಬರುತ್ತಿರುವುದು ನಿಜಕ್ಕೂ ಖುಷಿಯ ವಿಚಾರ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ಬ್ರಾಟಿಸ್ಲಾವಾದಲ್ಲಿರುವ ಸಿಟ್ರೊಯೆನ್‌ C3, C3 ಏರ್‌ಕ್ರಾಸ್ ಮತ್ತು ಒಪೆಲ್ ಫ್ರಾಂಟೆರಾ ಮಾದರಿಗಳ ವಾಹನ ತಯಾರಕ ಸಂಸ್ಥೆಯಾದ ಸ್ಟೆಲ್ಲಾಂಟಿಸ್ ಈಗಾಗಲೇ ಅಟೊಮೊಬೈಲ್‌ ವಿದ್ಯುತ್ ಕೌಶಲ್ಯ ತರಬೇತಿ ಹೊಂದಿದವರನ್ನು ಕಳುಹಿಸಿಕೊಡಬೇಕೆಂದು ಮನವಿ ಮಾಡಿದೆ.
ಬ್ರಾಟಿಸ್ಲಾವಾ ಬಳಿಯ ತ್ರ್ವಾನಾ ಘಟಕದಲ್ಲಿ ಈಗಾಗಲೇ ಕರ್ನಾಟಕದ ಸುಮಾರು 100 ಅಸೆಂಬ್ಲಿ-ಲೈನ್ ಆಪರೇಟರ್‌ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಫೆಬ್ರವರಿ 2026 ರಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಉದ್ಯೋಗ ಮೇಳಕ್ಕೆ ಪೂರ್ವಭಾವಿಯಾಗಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್, ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಯುರೋಪ್‌ ಖಂಡದ ಪ್ರವಾಸ ಕೈಗೊಂಡಿದ್ದು, ರೋಡ್ ಶೋ ನಡೆಸಿ, ವಿವಿಧ ನಗರಗಳಿಗೂ ಭೇಟಿ ನೀಡುತ್ತಿದ್ದಾರೆ. ಮಂಗಳವಾರ ಸಂಜೆ ಹಾಗೂ ಬುಧವಾರ ಸ್ಟೆಲ್ಲಾಂಟಿಸ್‌ಗೆ ಭೇಟಿ ನೀಡಿದ ಉಭಯ ಸಚಿವರು, ಕರ್ನಾಟಕದ ಉದ್ಯೋಗಿಗಗಳಿಗೆ ಸ್ಥಾವರದಲ್ಲಿ ನೀಡುತ್ತಿರುವ ಸೌಲಭ್ಯಗಳು ಮತ್ತು ಇತರೆ ವ್ಯವಸ್ಥೆಯ ಕುರಿತು ಪರಿಶೀಲಿಸಿದರು.

Leave a Reply

Your email address will not be published. Required fields are marked *

error: Content is protected !!