ಉದಯವಾಹಿನಿ, ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಯ ಗೌರವಧನ ಹೆಚ್ಚಳ ಮತ್ತು ಸಾಮಾಜಿಕ ಭದ್ರತೆಯ ಬಗ್ಗೆ ಸಂಸದ ಡಾ.ಕೆ.ಸುಧಾಕರ್ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ.ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿ ಧರಣಿ ನಡೆಸುತ್ತಿರುವ ಸಮಯದಲ್ಲೇ ಸಂಸದ ಡಾ.ಕೆ.ಸುಧಾಕರ್ ಲೋಕಸಭೆಯ ಶೂನ್ಯವೇಳೆಯಲ್ಲಿ ಈ ಸಮಸ್ಯೆ ಕುರಿತು ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಯಲ್ಲಿ ಬಹುತೇಕ ಬಡಕುಟುಂಬದ ಮಹಿಳೆಯರೇ ಆಗಿದ್ದಾರೆ. ಶಾಲಾ ಮಕ್ಕಳಿಗೆ ಬಿಸಿಯೂಟ ಪೂರೈಕೆ, ಅಪೌಷ್ಟಿಕತೆ ನಿವಾರಣೆ, ಗರ್ಭಿಣಿಯರು ಹಾಗೂ ತಾಯಂದಿರಿಗೆ ಸರ್ಕಾರಿ ಯೋಜನೆಗಳ ನೆರವು ಸೇರಿದಂತೆ ಹಲವಾರು ವಿಧದಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದಾರೆ. ಅಪೌಷ್ಟಿಕತೆ ವಿರುದ್ಧ ಹೋರಾಡುತ್ತಿರುವ ಈ ಮಹಿಳೆಯರು ಅತೀ ಕಡಿಮೆ ಗೌರವಧನ ಪಡೆಯುತ್ತಿದ್ದು, ಆರ್ಥಿಕವಾಗಿ ತೀರಾ ದುರ್ಬಲರಾಗಿದ್ದಾರೆ ಎಂಬುದು ಬೇಸರದ ಸಂಗತಿ. ಆದ್ದರಿಂದ ಹೋರಾಟ ಮಾಡುತ್ತಿರುವ ಮಹಿಳೆಯರ ಅಹವಾಲುಗಳನ್ನು ಕೇಂದ್ರ ಸರ್ಕಾರ ಆಲಿಸಬೇಕು ಎಂದು ಮನವಿ ಮಾಡಿದರು.

 

Leave a Reply

Your email address will not be published. Required fields are marked *

error: Content is protected !!