ಉದಯವಾಹಿನಿ, ಶಿವಮೊಗ್ಗ: ಬೈಕ್ ಅಪಘಾತವಾಗಿ ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವಕರ ಮೇಲೆ ಟ್ರ್ಯಾಕ್ಟರ್ ಹರಿದು ಸಾವನ್ನಪ್ಪಿದ ಘಟನೆ ಆಯನೂರು ಹಾರನಹಳ್ಳಿ ರಸ್ತೆಯಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ಆಕೀಬ್ (25) ಮತ್ತು ಚಾಂದ್ ಪೀರ್ (18) ಮೃತ ದುರ್ದೈವಿಗಳು. ಎರಡು ಬೈಕುಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ, ಬೈಕ್ ಚಾಲಕ ಮತ್ತು ಹಿಂಬದಿ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದರು. ಇದೇ ಸಂದರ್ಭದಲ್ಲಿ ಹಿಂದೆ ಬರುತ್ತಿದ್ದ ಟ್ರ್ಯಾಕ್ಟರ್ ಕೆಳಕ್ಕೆ ಬಿದ್ದವರ ಮೇಲೆ ಹರಿದಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
