ಉದಯವಾಹಿನಿ, ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲಿ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಅವರನ್ನು ಬಳಕೆ ಮಾಡಿಕೊಳ್ಳಬಾರದು ಎಂದಿದ್ದೆ. ನಮ್ಮ ಹಾಗೂ ದೊಡ್ಡ ಸ್ವಾಮೀಜಿಗಳ ಸಂಬಂಧ ಹಲವರಿಗೆ ಗೊತ್ತಿಲ್ಲ. ಬಾಲಗಂಗಾಧರನಾಥ ಸ್ವಾಮೀಜಿಗಳು ಸಮಾಜದ ಗೌರವ ಉಳಿಸಲಿಕ್ಕೆ ಬೀದಿಗೆ ಬಂದವರು. ಅವರಿಗೆ ದೇವೇಗೌಡರು ಸಿಎಂ ಆಗಲಿ ಎನ್ನುವುದು ಮನಸ್ಸಿನಲ್ಲಿತ್ತು. ನನ್ನನ್ನು ಕಂಡರೂ ಅವರಿಗೆ ತುಂಬಾ ಇಷ್ಟವಿತ್ತು. ನನ್ನಿಂದ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಅಪಚಾರ ಆಗಿದ್ರೆ ಸಾರ್ವಜನಿಕ ಕ್ಷಮೆಯಾಚಿಸುತ್ತೇನೆ ಎಂದರು. ಪ್ರಸಕ್ತ ರಾಜಕೀಯ ವಿದ್ಯಮಾನಗಳು ಏನು ನಡೆಯುತ್ತಿವೆ ಎಂದು ಎಲ್ಲರಿಗೂ ಗೊತ್ತು. ಈ ಬಗ್ಗೆ ನಮ್ಮ ನಿರ್ಮಲಾನಂದ ಶ್ರೀಗಳು ಮಾತನಾಡಿದ್ದಾರೆ. ಅವರು ಮಾತಾಡಿದ್ದಕ್ಕೆ ಇನ್ಯಾರೋ ಮಾತಾಡಿದ್ದಾರೆ. ನಮ್ಮ ಸ್ವಾಮೀಜಿಯಷ್ಟು ಶಿಕ್ಷಣ ಹೊಂದಿರುವವರು ದೇಶದ ಇತಿಹಾಸದಲ್ಲಿ ಮತ್ತೊಬ್ಬರು ಯಾರು ಇಲ್ಲ ಎಂದಿದ್ದಾರೆ. ರಾಜ್ಯದಲ್ಲಿ ಎದ್ದಿದ್ದ ಕುರ್ಚಿ ಕದನದ ವೇಳೆ ಡಿಕೆಶಿ ಪರ ಶ್ರೀಗಳು ಬೆಂಬಲ ಸೂಚಿಸಿದ್ದಾಗ, ನಾನು ಸ್ವಾಮೀಜಿ ಬೆಂಬಲ ಕೇಳಿರಲಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದರು. ಈ ಬಗ್ಗೆ ಡಿಕೆಶಿ, ಶಾಸಕ ಬಾಲಕೃಷ್ಣ ಸೇರಿದಂತೆ ಹಲವರು ಹೆಚ್‌ಡಿಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!