ಉದಯವಾಹಿನಿ, ದಾವಣಗೆರೆ: ಶಿವನ ಫ್ಲೆಕ್ಸ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಲ್ಲೇಶ್ವರ ಕಾರ್ತಿಕೋತ್ಸವ ಹಿನ್ನೆಲೆ ಗ್ರಾಮದ ಪ್ರಮುಖ ಕಡೆ ಫ್ಲೆಕ್ಸ್ ಅಳವಡಿಕೆ ಮಾಡಲಾಗಿತ್ತು. ಮಹಾದ್ವಾರದ ಬಳಿ ಅಳವಡಿಕೆ ಮಾಡಿದ್ದ ಫ್ಲೆಕ್ಸ್‌ಗೆ ಶುಕ್ರವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಆರೋಪಿಗಳ ಬಂಧನಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸಾಸ್ವೇಹಳ್ಳಿಗೆ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಭೇಟಿ ನೀಡಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿ, ಹಿಂದೂ ಭಾವನೆಗೆ ಧಕ್ಕೆ ತರುವ ಕೆಲಸವನ್ನು ಕಿಡಿಗೇಡಿಗಳು ಮಾಡಿದ್ದಾರೆ. ಹಿಂದೂಗಳ ಹಬ್ಬಗಳಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಪೊಲೀಸರಿಗೆ ಕೂಡಲೇ ಕಿಡಿಗೇಡಿಗಳ ಬಂಧನ ಮಾಡುವಂತೆ ಸೂಚನೆ ಮಾಡಿದ್ದಾರೆ. ಏನಾದರೂ ಬಂಧನ ಮಾಡದಿದ್ದರೆ ಹೋರಾಟ ಮಾಡುವ ಎಚ್ಚರಿಕೆ ಕೊಟ್ಟಿದ್ದಾರೆ.
