
ಉದಯವಾಹಿನಿ , ಚಂಡೀಗಢ: ಮುಖ್ಯಮಂತ್ರಿ ಹುದ್ದೆ ಪಡೆಯಲು 500 ಕೋಟಿ ರೂ. ಕೊಡಬೇಕು ಎಂಬ ಕಾಂಗ್ರೆಸ್ ನಾಯಕಿ ನವಜೋತ್ ಕೌರ್ ಸಿಧು ಹೇಳಿಕೆ ಪಂಜಾಬ್‌ನಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ.
ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ಭೇಟಿಯಾದ ನಂತರ ಅವರ ನೀಡಿದ ಹೇಳಿಕೆ ಬಿಜೆಪಿ ಮತ್ತು ಎಎಪಿಯಿಂದ(AAP) ತೀವ್ರ ಟೀಕೆಗೆ ಗುರಿಯಾಗಿದೆ. ಅಷ್ಟೇ ಅಲ್ಲದೇ ಪಕ್ಷದೊಳಗೆ ತೀವ್ರ ಅಸಮಾಧಾನವನ್ನುಂಟುಮಾಡಿವೆ.ಪಕ್ಷವು 2027ರ ವಿಧಾನಸಭಾ ಚುನಾವಣೆಗೆ ತಮ್ಮ ಪತಿ, ಮಾಜಿ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಿದರೆ ಮಾತ್ರ ಅವರು ಸಕ್ರಿಯ ರಾಜಕೀಯಕ್ಕೆ ಮರಳಲು ಪರಿಗಣಿಸುತ್ತಾರೆ ಎಂದು ನವಜೋತ್ ಕೌರ್ ಹೇಳಿದ್ದಾರೆ. ನನ್ನ ಪತಿಯನ್ನು ಸಿಎಂ ಅಭ್ಯರ್ಥಿಯನ್ನಾಗಿ ಬಿಂಬಿಸುವುದು ಅನುಮಾನ. ರಾಜ್ಯ ಕಾಂಗ್ರೆಸ್‌ನಲ್ಲಿ ತೀವ್ರ ಆಂತರಿಕ ಕಲಹವಿದ್ದು, ಈಗಾಗಲೇ ಹಲವು ನಾಯಕರು ಉನ್ನತ ಹುದ್ದೆಗೆ ಲಾಬಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
