ಉದಯವಾಹಿನಿ , ಶಿವರಾಜ್‌ಕುಮಾರ್‌ ಅಭಿನಯದ ಜೋಗಿ, ಪ್ರೇಮ್ ನಟನೆ, ನಿರ್ದೇಶನದ ಪ್ರೀತಿ ಏಕೆ ಭೂಮಿ ಮೇಲಿದೆ ಹೀಗೆ ಯಶಸ್ವಿ ಚಿತ್ರಗಳನ್ನೇ ನಿರ್ಮಿಸಿದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ತಮ್ಮ ಪುತ್ರ ಅರುಣ್ ರಾಮ್‌ಪ್ರಸಾದ್‌ನ್ನು ನಾಯಕನಾಗಿ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಆ ಚಿತ್ರದ ಹೆಸರು ಘಾರ್ಗ. ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಈ ಚಿತ್ರದ ‘ನೀನು ನನಗೆ’ ಎಂಬ ರೊಮ್ಯಾಂಟಿಕ್ ಹಾಡನ್ನು ಬಿಡುಗಡೆ ಮಾಡಲಾಯಿತು, ಇದೊಂದು ಅಡ್ವೆಂಚರಸ್ ಡ್ರಾಮಾ ಕಥಾನಕವಾಗಿದ್ದು, ಚಿತ್ರದಲ್ಲಿ ಅರುಣ್ ಒಬ್ಬ ರೈಟರ್, ಸಂಶೋಧಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎಂ.ಶಶಿಧರ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದಲ್ಲಿ ಘಾರ್ಗಾ ಒಂದು ಊರಿನ ಹೆಸರು. ನಾಯಕಿ ಪಾತ್ರದಲ್ಲಿ ರೆಹಾನ ಅಭಿನಯಿಸಿದ್ದಾರೆ.
ಈ ಸಂದರ್ಭದಲ್ಲಿ ನಿರ್ಮಾಪಕ ರಾಮ್‌ಪ್ರಸಾದ್‌ ಮಾತನಾಡುತ್ತಾ ಚಿತ್ರರಂಗದಲ್ಲಿ 40 ವರ್ಷ ಆಡಿಯೋ ಕಂಪನಿ ಮಾಲೀಕ, ನಿರ್ಮಾಪಕನಾಗಿ ಕೆಲಸ ಮಾಡಿದ್ದೇನೆ. ಇದೀಗ ನನ್ನ ಮಗನನ್ನ ಲಾಂಚ್ ಮಾಡುತ್ತಿದ್ದೇನೆ. ಈ ಚಿತ್ರವನ್ನ 4 ವರ್ಷಗಳ ಹಿಂದೆಯೇ ಶುರು ಮಾಡಿದ್ದೆವು, ಹಲವಾರು ಕಾರಣಗಳಿಂದ ತಡವಾಯಿತು. ಇದೊಂದು ವಿಭಿನ್ನ ಜಾನರ್ ಚಿತ್ರ, ನಾಯಕ ಇಲ್ಲಿ 3 ಗೆಟಪ್‌ಗಳಲ್ಲಿ ಕಾಣಿಸಿಕೊಳ್ಳುತ್ತಾನೆ, ಚಿಕ್ಕಮಗಳೂರಿನಲ್ಲಿ ಸೆಟ್ ಹಾಕಿ ಶೂಟಿಂಗ್ ಮಾಡುವಾಗ ಸೆಟ್ ಸುಟ್ಟು ಸ್ವಲ್ಪ ತೊಂದರೆಯಾಯಿತು, ನಿರ್ದೇಶಕ ಶಶಿಧರ್ ತುಂಬಾ ಚೆನ್ನಾಗಿ ಕಥೆ, ಚಿತ್ರಕಥೆ ಮಾಡಿದ್ದಾರೆ. ಚಿತ್ರವೀಗ ಬಿಡುಗಡೆಗೆ ಸಿದ್ದವಿದ್ದು, ಸೆನ್ಸಾರ್‌ಗೆ ಹೋಗಲು ಅಣಿಯಾಗಿದೆ. ಜನವರಿ ವೇಳೆಗೆ ರಿಲೀಸ್ ಮಾಡುವ ಯೋಜನೆಯಿದೆ, ಎನ್. ಕುಮಾರ್ ಅವರು ನಮ್ಮ ಚಿತ್ರಞನ್ನ ರಿಲೀಸ್ ಮಾಡುತ್ತಿದ್ದಾರೆ ಎಂದರು.

Leave a Reply

Your email address will not be published. Required fields are marked *

error: Content is protected !!