ಉದಯವಾಹಿನಿ,ಬೆಂಗಳೂರು: ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರ್ಕಾರಿ ಕಚೇರಿಗಳನ್ನು ಅಲೆಯುವ ಅಗತ್ಯ ಇರುವುದಿಲ್ಲ ಅಂತ DCM ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಅವರು ಇಂದು ಬ್ರಾಂಡ್ ಬೆಂಗಳೂರು ಸಂವಾದದ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು, ಇದೇ ವೇಳೆ ಅವರು ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರ್ಕಾರಿ ಕಚೇರಿಗಳನ್ನು ಅಲೆಯುವ ಅಗತ್ಯ ಇರುವುದಿಲ್ಲ. ಸರ್ಕಾರವೇ ಅವರ ಮನೆ ಬಾಗಿಲಿಗೆ ಅವರ ಆಸ್ತಿ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. ಖಾತೆ ಎಂದು ಕರೆಯುವ ಬದಲು ಅದಕ್ಕೆ ಬೇರೆ ಹೆಸರು ಇಟ್ಟು, ಎಲ್ಲ ಆಸ್ತಿ ದಾಖಲೆಗಳನ್ನು ಒದಗಿಸಲಾಗುವುದು. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಹಳ್ಳಿಗಳಲ್ಲಿ ಮನೆ ಬಾಗಿಲಿಗೆ ಪಾಣಿಗಳನ್ನು ನೀಡುವ “ಭೂಮಿ” ವ್ಯವಸ್ಥೆ ಮಾಡಲಾಗಿತ್ತು.ಇದೇ ಮಾದರಿಯಲ್ಲಿ ಬೆಂಗಳೂರು ನಗರದಲ್ಲಿ ಮನೆ ಬಾಗಿಲಲ್ಲೇ ಆಸ್ತಿ ದಾಖಲೆಗಳನ್ನು ನೀಡುವ ವ್ಯವಸ್ಥೆ ಜಾರಿಗೆ ತರಲಾಗುವುದು ಅಂಥ ತಿಳಿಸಿದರು. ಇನ್ನೂ ಇನ್ನು ಆಸ್ತಿ ತೆರಿಗೆ ವಿಚಾರವಾಗಿ ಇಂದಿನ ಸಭೆಯಲ್ಲಿ ಚರ್ಚೆಯಾಗಿದ್ದು, ಕಾನೂನು ರೀತಿಯಲ್ಲಿ ತೆರಿಗೆ ಕಟ್ಟುತ್ತಿರುವವರಿಗೆ ತೊಂದರೆಯಾಗುತ್ತಿದ್ದು, ತೆರಿಗೆ ಕಟ್ಟದವರಿಗೆ ರಕ್ಷಣೆ ಸಿಗುತ್ತಿದೆ ಎಂಬ ವಿಚಾರವನ್ನು ಪ್ರಸ್ತಾಪಿಸಲಾಯಿತು.ನಾವು ಮನೆ ಬಾಗಿಲಲ್ಲೇ ಆಯಾ ಆಸ್ತಿ ದಾಖಲೆಗಳನ್ನು ತಲುಪಿಸಿದರೆ, ಯಾರ ಬಳಿ ಎಷ್ಟು ಆಸ್ತಿ ಇದೆ ಎಂಬ ಸ್ಪಷ್ಟ ಚಿತ್ರಣ ಸಿಗುತ್ತದೆ. ಆಗ ಯಾರೂ ಕೂಡ ಆಸ್ತಿ ತೆರಿಗೆ ಪಾವತಿಸದೇ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಆಸ್ತಿ ತೆರಿಗೆ ವಿಚಾರದಲ್ಲಿ ದೊಡ್ಡವರು, ಸಣ್ಣವರು ಎಂಬ ಬೇಧ ಮಾಡುವುದಿಲ್ಲ. ಈ ವಿಚಾರದಲ್ಲಿ ಯಾರು ತೆರಿಗೆ ಪಾವತಿಸಿಲ್ಲ ಎಂದು ಮ್ಯಾಪಿಂಗ್ ಮಾಡುತ್ತೇವೆ.ನಾವು ನಮ್ಮ ಸಂಪನ್ಮೂಲ ವೃದ್ಧಿಸಿಕೊಳ್ಳದಿದ್ದರೆ ಬೆಂಗಳೂರು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ನಾವು ಕೈಗೆತ್ತಿಕೊಳ್ಳಲು ಮುಂದಾಗಿರುವ ಬೃಹತ್ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ ಮಾಡಿಕೊಳ್ಳಬೇಕು. ಹೀಗಾಗಿ ಎಲ್ಲರೂ ತೆರಿಗೆ ಪಾವತಿಸುವಂತೆ ನೋಡಿಕೊಳ್ಳಬೇಕು.ಇನ್ನು ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಮಕ್ಕಳ ಅಭಿಪ್ರಾಯವನ್ನು ಪಡೆಯಲು ಸಲಹೆ ಬಂದಿದ್ದು, ಮಕ್ಕಳ ಸಲಹೆಯನ್ನು ಸರ್ಕಾರ ಪರಿಗಣಿಸಲಿದೆ. ಈ ವಿಚಾರವಾಗಿ ಹೈಸ್ಕೂಲ್ ಹಾಗೂ ಕಾಲೇಜು ವಿದ್ಯಾರ್ಥಿಗಳ ಜೊತೆ ಸಭೆ ಆಯೋಜಿಸುವಂತೆ ಒಂದು ಸಂಸ್ಥೆಗೆ ಸೂಚನೆ ನೀಡಿದ್ದೇನೆ.
