ಉದಯವಾಹಿನಿ , ಬೆಳಗಾವಿ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಿಸುವ ಬಗ್ಗೆ ಮುಂದಿನ ಆಯವ್ಯಯದಲ್ಲಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಬುಡ್ನ ಸಿದ್ದಿರವರ ಚುಕ್ಕೆ ಗುರುತಿನ ಪ್ರಶ್ನೆ ಉತ್ತರಿಸಿದ ಅವರು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಭಾಗದ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಸತಿ ನಿಲಯಗಳನ್ನು ನಿರ್ಮಿಸುವ ಅಗತ್ಯತೆಯನ್ನು ತಿಳಿಸಿ, ಈ ಬಗ್ಗೆ ಮಾಹಿತಿ ಕೋರಿದರು.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಭಾಗದ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ವಿವಿಧ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವಂತೆ ಯಲ್ಲಾಪುರದಲ್ಲಿ ವಸತಿ ನಿಲಯವನ್ನು ನಿರ್ಮಿಸಲು, ಆಯವ್ಯಯದಲ್ಲಿ ಒಳಪಡಿಸಲು ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು.
