ಉದಯವಾಹಿನಿ , ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಇಂದು ದ್ವೇಷ ಭಾಷಣದ ವಿರುದ್ಧ ಕಾನೂನು ತಂದಿರುವುದು ಸಂವಿಧಾನದ ವಿರುದ್ಧವಿದೆ. ನಾವು ಇದನ್ನು ಖಂಡಿಸುತ್ತೇವೆ. ಅಲ್ಲದೇ ಇದರ ವಿರುದ್ಧ ಬಿಜೆಪಿ ಕಾನೂನಾತ್ಮಕ ಹೋರಾಟ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ಮ ವಾಕ್ ಸ್ವಾತಂತ್ರ‍್ಯ, ವ್ಯಕ್ತಿ ಸ್ವಾತಂತ್ರ‍್ಯ ಮೊಟಕುಗೊಳಿಸುವ ಕಾನೂನು. ಈಗಾಗಲೇ ದ್ವೇಷದ ಭಾಷಣ ತಡೆಯಲು ಸಾಕಷ್ಟು ಕಾನೂನುಗಳಿವೆ. ಆ ಕಾನೂನು ಬಳಸಬಹುದು. ಆದರೆ ಹತ್ತು ವರ್ಷದ ಶಿಕ್ಷೆ ಕಾನೂನು ತಂದು ಸರ್ಕಾರದ ವಿರುದ್ಧ, ಅವರ ಪಕ್ಷದ ವಿರುದ್ಧ ಮಾತನಾಡುವವರಿಗೆ ನಾನು ಬೇಲೆಬಲ್ ವಾರೆಂಟ್ ತಂದು ಜೈಲಿಗೆ ಕಳುಹಿಸುವ ಹುನ್ನಾರ ಇದರಲ್ಲಿ ಇದೆ. ಇದು ಪ್ರಜಾಪ್ರಭುತ್ವ ವಿರುದ್ಧ ಎಂದು ಆರೋಪಿಸಿದ್ದಾರೆ.
ಒಂದು ರೀತಿಯಲ್ಲಿ ಕರ್ನಾಟಕದಲ್ಲಿ ತುರ್ತುಪರಿಸ್ಥಿತಿ ಘೋಷಣೆ ಆಗಿದೆ ಅಂತ ಭಾವನೆ ಬರುತ್ತಿದೆ. ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಎಲ್ಲ ರಂಗದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿರುವ ಸರ್ಕಾರ ದೀನ ದಲಿತರ ಹಣವನ್ನು ಲಪಟಾಯಿಸಿರುವ ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಅದರ ವಿರುದ್ಧ ಯಾರಾದರೂ ಧ್ವನಿ ಎತ್ತಿದರೆ, ಅವರ ಧ್ವನಿಯನ್ನು ದಮನ ಮಾಡುವ ದಮನಕಾರಿ ಕಾನೂನು ತಂದಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!