ಉದಯವಾಹಿನಿ , ಬೆಳಗಾವಿ: ಹೊಸ ನ್ಯಾಯಬೆಲೆ ಅಂಗಡಿಗೆ ಮಂಜೂರಾತಿ ಅವಕಾಶ ಕಲ್ಪಿಸಲಾಗಿದ್ದು, ಅಗತ್ಯಾನುಸಾರ ಗ್ರಾಮಗಳಲ್ಲಿ ಉಪಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ಕ್ರಮವಹಿಸುವುಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ(6)ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮವಹಿಸಲಾಗುತ್ತಿದೆ. ಸಣ್ಣ ಸಣ್ಣ ಗ್ರಾಮದ ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಗ್ರಾಮಗಳಲ್ಲಿ ಉಪಕೇಂದ್ರಗಳನ್ನು ತೆರೆದು ಆಹಾರ ಧಾನ್ಯ ಹಂಚಿಕೆ ಮಾಡಲು ಕ್ರಮವಹಿಸಲಾಗುವುದು. ಪಡಿತರ ಚೀಟಿಗಳ ಸಂಖ್ಯಾನುಸಾರ ಅಗತ್ಯವಿದ್ದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!