ಉದಯವಾಹಿನಿ ಹುಳಿಯಾರು: ಹುಳಿಯಾರಿನ ವಿದ್ಯಾವಾರಿಧಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ೨೦೨೩-೨೪ ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಸಂಗಮ ೨೦೨೩ ರ ಕಾರ್ಯಕ್ರಮದೊಂದಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಶನಿವಾರ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ೧೦ ನೇ ತರಗತಿಯಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಅತಿ ಹೆಚ್ಚು ೬೨೫ ಕ್ಕೆ ೬೧೬ ಅಂಕ ಪಡೆದು ತಮ್ಮ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ದಾಖಲಾಗಿರುವ ವಿದ್ಯಾರ್ಥಿಯಾದ ಆದಿತ್ಯ.ಹೆಚ್.ಎಸ್ ಅನ್ನು ಸಂಸ್ಥೆಯ ಅಧ್ಯಕ್ಷರಾದ ಕೆ.ಎಸ್.ಕಿರಣ್ ಕುಮಾರ್ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಬಿ.ಕವಿತಕಿರಣ್‌ಕುಮಾರ್, ಆಡಳಿತಾಧಿಕಾರಿ ಅಮಿತ್, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಇದ್ದರು.

Leave a Reply

Your email address will not be published. Required fields are marked *

error: Content is protected !!